ಸಂಸತ್ತಿನಲ್ಲಿ ಗಡಿ ಗದ್ದಲ, ಕರ್ನಾಟಕ-ಮಹಾರಾಷ್ಟ್ರ ಸಂಸದರ ವಾಗ್ವಾದ!
ಕರ್ನಾಟಕ ಹಾಗೂ ಮಹಾರಾಷ್ಟ್ರ ನಡುವಿನ ಗಡಿ ವಿವಾದ ಸಂಸತ್ತಿನಲ್ಲೂ ಸದ್ದು ಮಾಡಿದೆ. ಎನ್‌ಸಿಪಿಯ ಸುಪ್ರಿಯಾ ಸುಳೆ ಬುಧವಾರ ಈ ವಿಚಾರವನ್ನು ಸಂಸತ್ತಿನಲ್ಲಿ ಪ್ರಸ್ತಾಪ ಮಾಡಿದ ಬೆನ್ನಲ್ಲಿಯೇ ಕರ್ನಾಟಕ ಹಾಗೂ ಮಹಾರಾಷ್ಟ್ರ ಸಂಸದರ ನಡುವೆ ವಾಗ್ವಾದಕ್ಕೆ ಸಾಕ್ಷಿಯಾಗಿದೆ.
ನವದೆಹಲಿ (ಡಿ.7): ಮಹಾರಾಷ್ಟ್ರ-ಕರ್ನಾಟಕ ಗಡಿಯಲ್ಲಿ ಉದ್ವಿಗ್ನತೆ ಮುಂದುವರಿದಿದೆ. ಎನ್‌ಸಿಪಿ ಸಂಸದೆ ಸುಪ್ರಿಯಾ ಸುಳೆ ಬುಧವಾರ ಸಂಸತ್ತಿನಲ್ಲಿ ವಿವಾದವನ್ನು ಪ್ರಸ್ತಾಪಿಸಿದರು. ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದ ವಿರುದ್ಧ ಬೇಕಾಬಿಟ್ಟಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಆರೋಪಿಸಿದ ಸುಳೆ, ಅವರು ಮಹಾರಾಷ್ಟ್ರವನ್ನು ಒಡೆಯಲು ಪಿತೂರಿ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.
ಕೇಂದ್ರದ ಬೆಂಬಲವಿಲ್ಲದೆ ಕರ್ನಾಟಕದ ಹಿರೇಬಾಗೇವಾಡಿಯಲ್ಲಿ ಮಹಾರಾಷ್ಟ್ರ ನಂಬರ್ ಪ್ಲೇಟ್ ಹೊಂದಿರುವ ವಾಹನಗಳ ಮೇಲೆ ದಾಳಿ ನಡೆಯಲು ಸಾಧ್ಯವಿಲ್ಲ ಎಂದು ಶಿವಸೇನಾ ಸಂಸದ ಸಂಜಯ್ ರಾವುತ್ ಬುಧವಾರ ಹೇಳಿದ್ದಾರೆ. ಮಂಗಳವಾರ ಮಧ್ಯಾಹ್ನ ಬೆಳಗಾವಿ ಸಮೀಪದ ಕರ್ನಾಟಕದ ಹಿರೇಬಾಗೇವಾಡಿ ಪ್ರದೇಶದಲ್ಲಿ ಮಹಾರಾಷ್ಟ್ರದ ನಂಬರ್ ಪ್ಲೇಟ್ ಹೊಂದಿರುವ ವಾಹನಗಳ ಮೇಲೆ ದಾಳಿ ನಡೆಸಲಾಗಿದ್ದು, ಉಭಯ ರಾಜ್ಯಗಳ ನಡುವಿನ ಗಡಿ ವಿವಾದ ಮಂಗಳವಾರ ಬೀದಿಗಿಳಿದಿದ್ದರಿಂದ ಹಲವರನ್ನು ವಶಕ್ಕೆ ಪಡೆಯಲಾಗಿದೆ.
ಕರ್ನಾಟಕ ಸೇರುತ್ತೇವೆಂದ ಗ್ರಾಮಸ್ಥರಿಗೆ ಮಹಾರಾಷ್ಟ್ರ ಪೊಲೀಸರಿಂದ ನೋಟಿಸ್
ಸುಪ್ರಿಯಾ ಸುಳೆ ಮಾತಿಗೆ ಆಕ್ಷೇಪ ವ್ಯಕ್ತಪಡಿಸಿದ ಶಿವಕುಮಾರ್ ಉದಾಸಿ, ಗಡಿ ವಿವಾದ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ. ಮಹಾರಾಷ್ಟ್ರ ನಾಯಕರು ರಾಜಕೀಯಕ್ಕೆ ಇದನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ.