ಕೋವಿಡ್ ನಿಯಂತ್ರಣ: ಕರ್ನಾಟಕಕ್ಕೆ 'ಅತ್ಯುತ್ತಮ ರಾಜ್ಯ ಪ್ರಶಸ್ತಿ' ಅವಾರ್ಡ್

ಕರ್ನಾಟಕಕ್ಕೆ ‘ಕೋವಿಡ್‌-19 ವಿರುದ್ಧ ಹೋರಾಡುತ್ತಿರುವ ಅತ್ಯುತ್ತಮ ರಾಜ್ಯ’ ಪ್ರಶಸ್ತಿ ಲಭಿಸಿದೆ. ಪ್ರತಿಷ್ಠಿತ ಮಾಧ್ಯಮ ಸಂಸ್ಥೆ ಇಂಡಿಯಾ ಟುಡೇ ಸಮೂಹ ‘ಇಂಡಿಯಾ ಟುಡೇ ಹೆಲ್ತ್‌ಗಿರಿ’ ಪ್ರಶಸ್ತಿಯನ್ನು ರಾಜ್ಯಕ್ಕೆ ನೀಡಿದೆ.  

Share this Video
  • FB
  • Linkdin
  • Whatsapp

ಬೆಂಗಳೂರು (ಅ. 03): ಕರ್ನಾಟಕಕ್ಕೆ ‘ಕೋವಿಡ್‌-19 ವಿರುದ್ಧ ಹೋರಾಡುತ್ತಿರುವ ಅತ್ಯುತ್ತಮ ರಾಜ್ಯ’ ಪ್ರಶಸ್ತಿ ಲಭಿಸಿದೆ. ಪ್ರತಿಷ್ಠಿತ ಮಾಧ್ಯಮ ಸಂಸ್ಥೆ ಇಂಡಿಯಾ ಟುಡೇ ಸಮೂಹ ‘ಇಂಡಿಯಾ ಟುಡೇ ಹೆಲ್ತ್‌ಗಿರಿ’ ಪ್ರಶಸ್ತಿಯನ್ನು ರಾಜ್ಯಕ್ಕೆ ನೀಡಿದೆ. ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಅವರು ರಾಜ್ಯ ಸರ್ಕಾರದ ಪರವಾಗಿ ಪ್ರಶಸ್ತಿ ಸ್ವೀಕರಿಸಿದರು. 

ಕಳೆದ ಒಂದೂವರೆ ವರ್ಷದಿಂದ ರಾಜ್ಯ ಸರ್ಕಾರ ಕೋವಿಡ್‌ ವಿರುದ್ಧ ಹೋರಾಟ ನಡೆಸುತ್ತಿದೆ. ಆರೋಗ್ಯ ಮೂಲಸೌಕರ್ಯ ಹೆಚ್ಚಳ, ಪರೀಕ್ಷೆ ಸಂಖ್ಯೆ ಹೆಚ್ಚಳ, ದಾಖಲೆ ಮಟ್ಟದಲ್ಲಿ ಕೋವಿಡ್‌ ಲಸಿಕೆ ನೀಡಿರುವುದು, ಕೊರೋನೋತ್ತರ ತಪಾಸಣೆ ಸೇರಿದಂತೆ ಮೊದಲಾದ ಕ್ರಮಗಳಿಂದಾಗಿ ರಾಜ್ಯದಲ್ಲಿ ಕೋವಿಡ್‌ ನಿಯಂತ್ರಣಕ್ಕೆ ಬಂದಿದೆ. ಈ ಎಲ್ಲ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಈ ಪ್ರಶಸ್ತಿ ಲಭ್ಯವಾಗಿದೆ.

Related Video