Asianet Suvarna News

ನಾಯಕತ್ವ ಬದಲಾವಣೆ: ಹಳೇ 'ಹುಲಿ'ನಾ.? ಹೊಸ 'ಕಲಿ'ನಾ.? ಅಂತಿಮ ವಿಜಯ ಯಾರದ್ದು..?

Jun 18, 2021, 1:55 PM IST

ಬೆಂಗಳೂರು (ಜೂ. 18): ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ ಮೂಡಿಸಿದ್ದ ಆಡಳಿತಾರೂಢ ಬಿಜೆಪಿ ಶಾಸಕರಿಂದ ಅಭಿಪ್ರಾಯ ಸಂಗ್ರಹ ಪ್ರಕ್ರಿಯೆ, ಮುಗಿದಿದ್ದು ಸುಮಾರು 52 ಶಾಸಕರು ಪಕ್ಷದ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಅವರನ್ನು ಭೇಟಿ ಮಾಡಿ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಪರ-ವಿರೋಧದ ಅಭಿಪ್ರಾಯಗಳನ್ನು ದಾಖಲಿಸಿದ್ದಾರೆ.

ಬೆಲ್ಲದ್ ಫೋನ್ ಟ್ಯಾಪಿಂಗ್ ಬಾಂಬ್; ಯಾರದು ಯುವರಾಜ ಸ್ವಾಮಿ..?

ಬದಲಾವಣೆ ವಿರೋಧವಾಗಿರುವ ಶಾಸಕರು, ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಬದಲಾಯಿಸಬಾರದು. ಸದ್ಯದ ಪರಿಸ್ಥಿತಿಯಲ್ಲಿ ಯಡಿಯೂರಪ್ಪ  ಅವರಿಗೆ ಪರ್ಯಾಯ ನಾಯಕರು ಪಕ್ಷದಲ್ಲಿ ಯಾರೂ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇನ್ನು ಬದಲಾವಣೆ ಪರ ಇರುವ ಶಾಸಕರು, ಆಡಳಿತದಲ್ಲಿ ಯಡಿಯೂರಪ್ಪ ಅವರ ಕುಟುಂಬದ ಹಸ್ತಕ್ಷೇಪದ ಬಗ್ಗೆ ಪ್ರಮುಖವಾಗಿ ಪ್ರಸ್ತಾಪಿಸಿದ್ದಾರೆ. ಇವೆಲ್ಲದರ ಬಗ್ಗೆ ವಿಸ್ತೃತ ವರದಿ ಇಲ್ಲಿದೆ.