
ಸಂಪುಟ ಸರ್ಜರಿಗೆ ಗ್ರೀನ್ ಸಿಗ್ನಲ್ ಸಿಕ್ಕಿದ್ರೆ ಯಾರಿಗೆ ಜಾಕ್‌ಪಾಟ್?
ಒಂದು ವೇಳೆ ಸಂಪುಟ ಸರ್ಜರಿಗೆ ಗ್ರೀನ್ ಸಿಗ್ನಲ್ ಸಿಕ್ಕಿದ್ರೆ ಯಾರಿಗೆ ಜಾಕ್‌ಪಾಟ್ ಸಿಗಲಿದೆ? ಯಾರೆಲ್ಲರ ಹೆಸರು ಲಿಸ್ಟ್‌ನಲ್ಲಿದೆ? ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್...
ಬೆಂಗಳೂರು (ಮೇ. 11): ಸಂಪುಟ ವಿಸ್ತರಣೆಗೆ (cabinet expansion) ಒಂದು ವೇಳೆ ಗ್ರೀನ್ ಸಿಗ್ನಲ್ ಸಿಕ್ಕಿದ್ದಲ್ಲಿ ಯಾರಿಗೆಲ್ಲಾ ಹೊಡೆಯಲಿದೆ ಜಾಕ್ ಪಾಟ್. ಸಚಿವ ಸಂಪುಟ ರೇಸ್ ನಲ್ಲಿ ಸಾಕಷ್ಟು ಸಚಿವಾಕಾಂಕ್ಷಿಗಳಿದ್ದಾರೆ. ಒಂದು ಅಂದಾಜಿನ ಪ್ರಕಾರ, 9 ಮಂದಿ ಸಚಿವಾಕಾಂಕ್ಷಿಗಳು ರೇಸ್ ನಲ್ಲಿದ್ದಾರೆ ಎಂದು ಹೇಳಲಾಗಿದೆ.
ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ (BY Vijayaendra), ಎಂಎಲ್ ಸಿ ಸಿಪಿ ಯೋಗೇಶ್ವರ್, ಕಲಬುರಗಿ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ್, ಕುಡಚಿಯ ಶಾಸಕ ಪಿ.ರಾಜೀವ್, ಎಂಎಲ್ ಸಿ ರವಿಕುಮಾರ್, ವಿಜಯಪುರದ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್, ಶಿರಸಿ ಕ್ಷೇತ್ರದ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ, ಹುಬ್ಬಳ್ಳಿ-ಧಾರವಾಡ ಶಾಸಕ ಅರವಿಂದ ಬೆಲ್ಲದ ಹಾಗೂ ಹೊನ್ನಾಳಿ ಶಾಸಕ ರೇಣುಕಾಚಾರ್ಯ ಅವರ ಹೆಸರುಗಳು ಮುಂಚೂಣಿಯಲ್ಲಿದೆ ಎಂದು ಹೇಳಲಾಗಿದೆ.
ದಿವ್ಯಾಳ ಗಂಡನಿಗೆ, ಆರ್.ಡಿ ಅಣ್ಣನಿಗೆ ಜೈಲೇ ಗತಿ, 13 ಆರೋಪಿಗಳ ಬೇಲ್ ರಿಜೆಕ್ಟ್
ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ಸಮಯದಲ್ಲಿ ಇವರೆಲ್ಲರೂ ತಮಗೆ ಸಂಪುಟದಲ್ಲಿ ಸ್ಥಾನ ಸಿಗಬಹುದು ಎನ್ನುವ ನಿರೀಕ್ಷೆಯಲ್ಲಿದ್ದಾರೆ.