7 ಜಿಲ್ಲೆಗಳಲ್ಲಿ 2 ದಿನ 'ರೆಡ್‌ ಅಲರ್ಟ್'; ಮೀನುಗಾರರೇ ಕಡಲಿಗಿಳಿಯಬೇಡಿ.!

ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಮೀನುಗಾರರು ಕಡಲಿಗೆ ಇಳಿಯಬೇಡಿ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

First Published Sep 11, 2020, 4:04 PM IST | Last Updated Sep 11, 2020, 4:05 PM IST

ಬೆಂಗಳೂರು (ಸೆ. 11): ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಎರಡು ದಿನಗಳ ಕಾಲ ‘ರೆಡ್‌ ಅಲರ್ಟ್‌’ ಘೋಷಣೆ ಮಾಡಲಾಗಿದೆ.

ಬಯಲುಸೀಮೆ ಸೇರಿ 6 ಜಿಲ್ಲೆಗಳಲ್ಲಿ ಭಾರೀ ಮಳೆ; ಜನಜೀವನ ಅಸ್ತವ್ಯಸ್ತ

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸೆ.11 ಮತ್ತು 12ರಂದು ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದ್ದು ಎರಡೂ ದಿನ ‘ರೆಡ್‌ ಅಲರ್ಟ್‌’ ಘೋಷಿಸಿರುವುದಾಗಿ ಹವಾಮಾನ ಇಲಾಖೆ ತಿಳಿಸಿದೆ.ರಾಜ್ಯದಲ್ಲಿ ನೈಋುತ್ಯ ಮುಂಗಾರು ಬಿರುಸುಗೊಂಡಿದ್ದು, ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ.