ಮಳೆಯಲ್ಲಿ ಮುಳುಗಿದ ಉಡುಪಿ; ಸುರಕ್ಷಿತ ಸ್ಥಳಗಳಿಗೆ ನಗರವಾಸಿಗಳು ದೌಡು!

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿದೆ. ಇದೇ ಮೊದಲ ಬಾರಿಗೆ ಉಡುಪಿ ಸಂಪೂರ್ಣ ಜಲಾವೃತವಾಗಿದೆ. 300 ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಜನರು ಸುರಕ್ಷಿತ ಸ್ಥಳಗಳಿಗೆ ಹೋಗುತ್ತಿದ್ದಾರೆ. 

First Published Sep 21, 2020, 9:56 AM IST | Last Updated Sep 21, 2020, 9:56 AM IST

ಉಡುಪಿ (ಸೆ. 21): ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿದೆ. ಇದೇ ಮೊದಲ ಬಾರಿಗೆ ಉಡುಪಿ ಸಂಪೂರ್ಣ ಜಲಾವೃತವಾಗಿದೆ. 300 ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಜನರು ಸುರಕ್ಷಿತ ಸ್ಥಳಗಳಿಗೆ ಹೋಗುತ್ತಿದ್ದಾರೆ. 

ಮುಂದಿನ ವಾರ ಭಾರೀ ಮಳೆ ಸಾಧ್ಯತೆ : ರೆಡ್ ಅಲರ್ಟ್ ಘೋಷಣೆ

ಉಡುಪಿಯಲ್ಲಿ ಇದುವರೆಗೂ ಕಂಡು ಕೇಳರಿಯದಷ್ಟು ಮಳೆಯಾಗಿದೆ. 38 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ 315 ಮಿಮಿ  ಮಳೆಯಾಗಿದೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇನ್ನೆರಡು ದಿನಗಳ ಕಾಲ ಭಾರೀ ಮಳೆ ಸುರಿಯುವ ಸಾಧ್ಯತೆ ಇದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ.

Video Top Stories