ಕೊರೋನಾ ವಾರಿಯರ್ಸ್ ವಿರುದ್ಧ ಹಲ್ಲೆ ಮಾಡಿದ್ರೆ 7 ವರ್ಷ ಜೈಲು ಫಿಕ್ಸ್..!

ಉತ್ತರ ಪ್ರದೇಶ ಹಾಗೂ ಕೇರಳ ಮಾದರಿಯನ್ನು ಅನುಸರಿಸಲು ಇದೀಗ ರಾಜ್ಯ ಸರ್ಕಾರ ಮುಂದಾಗಿದೆ. ಸುಗ್ರಿವಾಜ್ಞೆ ಅನ್ವಯ ಹಲ್ಲೆ ನಡೆಸುವ ಪುಂಡರ ಆಸ್ತಿಪಾಸ್ತಿ ಮುಟ್ಟುಗೋಲು ಹಾಕಲು ಅವಕಾಶವಿರುತ್ತದೆ.

Share this Video
  • FB
  • Linkdin
  • Whatsapp

ಬೆಂಗಳೂರು(ಏ.21): ಕೊರೋನಾ ವೈರಸ್ ವಿರುದ್ಧ ಅವಿರತ ಹೋರಾಟ ನಡೆಸುತ್ತಿರುವ ಕೊರೋನಾ ವಾರಿಯರ್ಸ್ ವಿರುದ್ಧ ಹಲ್ಲೆ ಮಾಡುವವರ ವಿರುದ್ಧ ಕಠಿಣ ಶಿಕ್ಷೆ ವಿಧಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಕೊರೋನಾ ವಾರಿಯರ್ಸ್ ವಿರುದ್ಧ ಹಲ್ಲೆ ನಡೆಸಿದರೆ 7 ವರ್ಷ ಜೈಲು ಶಿಕ್ಷೆ ವಿಧಿಸುವ ಸುಗ್ರಿವಾಜ್ಞೆಗೆ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದ್ದು, ನಾಳೆ(ಏ.22)ಯಿಂದಲೇ ಸುಗ್ರೀವಾಜ್ಞೆ ಜಾರಿಗೆ ಬರಲಿದೆ ಎಂದು ಮೂಲಗಳು ಸುವರ್ಣ ನ್ಯೂಸ್‌ಗೆ ಖಚಿತಪಡಿಸಿವೆ.

ಉತ್ತರ ಪ್ರದೇಶ ಹಾಗೂ ಕೇರಳ ಮಾದರಿಯನ್ನು ಅನುಸರಿಸಲು ಇದೀಗ ರಾಜ್ಯ ಸರ್ಕಾರ ಮುಂದಾಗಿದೆ. ಸುಗ್ರಿವಾಜ್ಞೆ ಅನ್ವಯ ಹಲ್ಲೆ ನಡೆಸುವ ಪುಂಡರ ಆಸ್ತಿಪಾಸ್ತಿ ಮುಟ್ಟುಗೋಲು ಹಾಕಲು ಅವಕಾಶವಿರುತ್ತದೆ.

ಪಾದರಾಯನಪುರ ಗಲಭೆಯ ಗುಟ್ಟು ಬಿಚ್ಚಿಟ್ಟ ಕೊರೋನ ವಾರಿಯರ್ಸ್!

ಬೆಂಗಳೂರಿನ ಪಾದರಾಯನಪುರದಲ್ಲಿ ಕೆಲ ಪುಂಡರು ಕೊರೋನಾ ವಾರಿಯರ್ಸ್ ಮೇಲೆ ಏಕಾಏಕಿ ಮುಗಿಬಿದ್ದು ಗೂಂಡಾಗಿರಿ ವರ್ತನೆ ತೋರಿದ್ದರು. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಈ ಕುರಿತಂತೆ ಕಠಿಣ ನಿಲುವು ತೆಗೆದುಕೊಂಡಿದೆ. ಕೊರೋನಾ ವಾರಿಯರ್ಸ್ ಮೇಲಿನ ಹಲ್ಲೆಯನ್ನು ರಾಜ್ಯದ ಎಲ್ಲಾ ನಾಯಕರು ಪಕ್ಷಾತೀತವಾಗಿ ಖಂಡಿಸಿದ್ದರು.


Related Video