ಉಚಿತ ಪ್ರಯಾಣದ ಶಕ್ತಿ ಯೋಜನೆ ನಿಲ್ಲುತ್ತಾ? ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು..
ರಾಜ್ಯದಲ್ಲಿ ಶಕ್ತಿ ಯೋಜನೆ ನಿಲ್ಲಿಸೋದಿಲ್ಲ. ಅದೆಲ್ಲವೂ ಊಹಾಪೋಹದ ವಿಚಾರವಾಗಿದೆ. ಇನ್ನು 10 ವರ್ಷ ಶಕ್ತಿ ಯೋಜನೆ ಮುಂದುವರಿಯುತ್ತದೆ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ಬೆಂಗಳೂರು (ಆ.16): ರಾಜ್ಯದಲ್ಲಿ ಶಕ್ತಿ ಯೋಜನೆ ನಿಲ್ಲಿಸೋದಿಲ್ಲ. ಅದೆಲ್ಲವೂ ಊಹಾಪೋಹದ ವಿಚಾರವಾಗಿದೆ. ಯೋಜನೆ ನಿಂತು ಹೋಗುತ್ತದೆ ಅಂತ ಊಹಾಪೋಹಗಳ ಕೇಳಿ ಬರ್ತಿದೆ. ಇದನ್ನ ಒಂದು ಪಕ್ಷ ಮಾಡಿಸ್ತಿದ್ದಾರೆ. ಆದರೆ, ರಾಜ್ಯದಲ್ಲಿ ಇನ್ನು 10 ವರ್ಷ ಶಕ್ತಿ ಯೋಜನೆ ಮುಂದುವರಿಯುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಮಹಿಳೆಯರು ಆತಂಕಪಡುವ ಅಗತ್ಯವಿಲ್ಲ. ರಾಜ್ಯದಲ್ಲಿ ಶಕ್ತಿ ಯೋಜನೆಯನ್ನು ಯಾರೂ ಕೂಡ ಪಾಸ್ ಪಡೆಯುವ ಅಗತ್ಯ ಇಲ್ಲ. ಮುಂದಿನ ಬಾರಿಯೂ ನಾವೇ ಅಧಿಕಾರಕ್ಕೆ ಬರುತ್ತೆವೆ.. 10 ವರ್ಷವೂ ಈ ಯೋಜನೆ ಮುಂದುವರೆಯಲಿದೆ ಎಂದು ಮಾಹಿತಿ ನೀಡಿದರು. ಇನ್ನು ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಶಕ್ತಿ ಯೋಜನೆ ಕೊನೆಗೊಳ್ಳಲಿದ್ದು, ಮಹಿಳೆಯರಿಗೆ ಒದಗಿಸುತ್ತಿರುವ ಉಚಿತ ಪ್ರಯಾಣ ಶೀಘ್ರದಲ್ಲಿಯೇ ಸ್ಥಗಿತಗೊಳ್ಳಲಿದೆ ಎಂದು ಹರಿದಾಡುತ್ತಿರುವ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.