Asianet Suvarna News Asianet Suvarna News

News Hour: ಕಮಿಷನ್ ಇಕ್ಕಟ್ಟಿಗೆ ಸಿಲುಕಿತಾ ರಾಜ್ಯ ಸರ್ಕಾರ..?

ರಾಜ್ಯ ರಾಜಕೀಯದಲ್ಲಿ ಮತ್ತೆ ಕಮಿಷನ್‌ ವಿಚಾರ ಮುನ್ನಲೆಗೆ ಬಂದಿದೆ. ಬುಧವಾರ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ, ಪದಾಧಿಕಾರಿಗಳೊಂದಿಗೆ ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿದರು. ಆ ಬಳಿಕ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ.
 

First Published Aug 24, 2022, 11:07 PM IST | Last Updated Aug 24, 2022, 11:07 PM IST

ಬೆಂಗಳೂರು (ಆ. 24): ರಾಜ್ಯ ಸರ್ಕಾರದ ವಿರುದ್ಧ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಮತ್ತೊಮ್ಮೆ ಕಮಿಷನ್‌ ಆರೋಪ ಮಾಡಿದ್ದಾರೆ. ಬುಧವಾರ ಸಂಘದ ಪದಾಧಿಕಾರಿಗಳೊಂದಿಗೆ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿದರು. ಈ ವೇಳೆ ರಾಜ್ಯದಲ್ಲಿ ನಡೆಯುತ್ತಿರುವ ಕಮಿಷನ್‌ ವ್ಯವಹಾರದ ಬಗ್ಗೆ ಚರ್ಚೆ ಮಾಡಿದರು. ಸಿದ್ಧರಾಮಯ್ಯ ಭೇಟಿಯ ಬಳಿಕ ಕೆಂಪಣ್ಣ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಭ್ರಷ್ಟಾಚಾರ ಮೊದಲು ಆಮೆಯ ವೇಗದಲ್ಲಿತ್ತು. ಈಗ ಅದು ಶರವೇದಲ್ಲಿದೆ ಎಂದು ಕೆಂಪಣ್ಣ ಹೇಳಿದ್ದಾರೆ. 22 ಸಾವಿರ ಕೋಟಿ ರೂಪಾಯಿ ಬಿಲ್‌ ಬಾಕಿ ಇದೆ  ಎಂದು ಹೇಳಿದ್ದಾರೆ. ಸದನದಲ್ಲಿ ಈ ವಿಚಾರವನ್ನು ಪ್ರಸ್ತಾಪ ಮಾಡುತ್ತೇನೆ ಎಂದು ಸಿದ್ಧರಾಮಯ್ಯ ಹೇಳಿದ್ದಾರೆ.

ಕರ್ನಾಟಕದಲ್ಲಿ ಮತ್ತೆ ಮುನ್ನೆಲೆಗೆ ಬಂದ ಕಮೀಷನ್, ಶಾಸಕ, ಸಚಿವರ ವಿರುದ್ಧ ಸ್ಫೋಟಕ ಆರೋಪ

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೆಂಪಣ್ಣ ಅವರ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಅವರು ದಾಖಲೆಯ ಜೊತೆಗೆ ಲೋಕಾಯುಕ್ತಕ್ಕೆ ದೂರು ನೀಡಲಿ. ಕೂಡಲೇ ತನಿಖೆಯೂ ಆಗಲಿ. ಇವೆಲ್ಲವೂ ಅಧಾರ ರಹಿತ ಆರೋಪ. ಹಿಂದಿನ ಎಲ್ಲಾ ಅರೋಪಗಳಿಗೂ ಸರ್ಕಾರ ಕ್ರಮ ಕೈಗೊಂಡಿದೆ. ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಪರಿಶೀಲನೆ ಮಾಡಿದ್ದೇವೆ ಎಂದು ಪ್ರತಿಕ್ರಿಯಿಸಿದ್ದಾರೆ.

Video Top Stories