PSI Recruitment Scam ರಾಜ್ಯದ 545 ಸಬ್ ಇನ್ಸ್ಪೆಕ್ಟರ್ ಗಳ ನೇಮಕಾತಿಯಲ್ಲಿ ಅಕ್ರಮ ಪತ್ತೆ!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ 545 ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (Sub inspector) ಹುದ್ದೆಗಳ ನೇಮಕಾತಿಯಲ್ಲಿ ಭಾರಿ ಅಕ್ರಮ ನಡೆದಿರುವುದು ಪತ್ತೆಯಾಗಿದೆ.

Share this Video
  • FB
  • Linkdin
  • Whatsapp

ಬೆಂಗಳೂರು(ಎ.10): ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ( Karnataka State Police) 545 ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (Sub inspector) ಹುದ್ದೆಗಳ ನೇಮಕಾತಿಯಲ್ಲಿ ಭಾರಿ ಅಕ್ರಮ ನಡೆದಿರುವುದು ಪತ್ತೆಯಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಅಕ್ರಮ ಪಾಸ್ ಆಗಿರುವುದು ಪತ್ತೆಯಾಗಿದ್ದು, ನೇಮಕಾತಿ ಇಲಾಖೆ ಇದರಲ್ಲಿ ಭಾಗಿಯಾಗಿವ ಶಂಕೆ ವ್ಯಕ್ತವಾಗಿದೆ. 545 ಪಿಎಸ್‌ಐ ಹುದ್ದೆಗಳಿಗೆ ಲಕ್ಷಾಂತರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು. ಇದೀಗ ಪರೀಕ್ಷೆಯಲ್ಲಿ ಭಾಗಿಯಾದ ಅಭ್ಯರ್ಥಿಗಳಿಂದ ಕೋಟಿಗಟ್ಟಲೆ ಹಣ ಪಡೆದು ಪಾಸ್ ಮಾಡಿರುವ ಆರೋಪವಿದೆ.

Uttara Kannada ಪ್ರೇಮಿಗಳಿಬ್ಬರ ಜೀವನಕ್ಕೆ ಕಂಟಕವಾಯ್ತು ಕುಡಿತದ ಚಟ!

ಈ ಹಿನ್ನೆಲೆಯಲ್ಲಿ ಮರು ಪರಿಶೀಲನೆ ನಡೆಸಲು ಸಿಐಡಿಗೆ ಅಭ್ಯರ್ಥಿಗಳು ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಇನ್ಸ್‌ಫೆಕ್ಟರ್ ದಿಲೀಪ್ ಕುಮಾರ್ ರಿಂದ ತನಿಖೆ ನಡೆದಿತ್ತು. ಈ ವೇಳೆ OMR ಶೀಟ್ ನಲ್ಲಿ ಬರೆದಿದ್ದೇ ಬೇರೆ ರಿಸಲ್ಟ್‌ ಬಂದಿದ್ದೇ ಬೇರೆ. ಹೀಗಾಗಿ ಈ ಅಕ್ರಮದಲ್ಲಿ ಅಧಿಕಾರಿಗಳು ಭಾಗಿಯಾಗಿರುವುದು ತಿಳಿದುಬಂದಿದೆ.

Related Video