ಸುಳ್ಯ ಕೋರ್ಟ್‌ನಿಂದ ವಾರೆಂಟ್: ಇಂದು ನ್ಯಾಯಾಲಯಕ್ಕೆ ಡಿಕೆಶಿ ಹಾಜರ್

ಸುಳ್ಯ ತಾಲೂಕು ನ್ಯಾಯಾಲಯದಿಂದ ವಾರಂಟ್‌ ಜಾರಿಯಾಗಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಇಂದು ಸುಳ್ಯ ಕೋರ್ಟ್‌ಗೆ ಹಾಜರಾಗಲಿದ್ದಾರೆ. 
 

Share this Video
  • FB
  • Linkdin
  • Whatsapp

ಮಂಗಳೂರು (ಅ. 05): ಸುಳ್ಯ ತಾಲೂಕು ನ್ಯಾಯಾಲಯದಿಂದ ವಾರಂಟ್‌ ಜಾರಿಯಾಗಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಇಂದು ಸುಳ್ಯ ಕೋರ್ಟ್‌ಗೆ ಹಾಜರಾಗಲಿದ್ದಾರೆ. 

ವೈದ್ಯಕೀಯ ಓದು, ರಾಜಕೀಯ ಅನುಭವ, ಡಾ. ಸುಧಾಕರ್ ಬೆಸ್ಟ್ ಆಗಿದ್ಹೇಗೆ.?

ಬೆಳ್ಳಾರೆಯ ಸಾಯಿ ಗಿರಿಧರ ರೈ ಎಂಬವರು 2016 ರ ಫೆ.28 ರಂದು ಆಗಿನ ಇಂಧನ ಸಚಿವ ಡಿ.ಕೆ.ಶಿವಕುಮಾರ್‌ಗೆ ದೂರವಾಣಿ ಕರೆ ಮಾಡಿ ಇಲ್ಲಿನ ವಿದ್ಯುತ್‌ ಅವ್ಯವಸ್ಥೆ ವಿಚಾರವಾಗಿ ತರಾಟೆಗೆ ತೆಗೆದುಕೊಂಡಿದ್ದರು. ಈ ವೇಳೆ ಅವಾಚ್ಯ ಶಬ್ದಗಳಿಂದ ನಿಂದಿಸಿದರೆಂಬ ಕಾರಣಕ್ಕಾಗಿ ವಿಷಯವನ್ನು ಡಿ.ಕೆ.ಶಿವಕುಮಾರ್‌ ಆಗಿನ ಮೆಸ್ಕಾಂ ಅಧಿಕಾರಿಗಳ ಗಮನಕ್ಕೆ ತಂದಿದ್ದರು. ಆ ತಕ್ಷಣ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. 

ಈ ಪ್ರಕರಣಕ್ಕೆ ಸಂಬಂಧಿಸಿ ಇತರರೆಲ್ಲ ಸಾಕ್ಷಿಗಳು ನ್ಯಾಯಾಲಯಕ್ಕೆ ಹಾಜರಾಗಿದ್ದರೂ ಸಾಕ್ಷಿದಾರರಲ್ಲೊಬ್ಬರಾದ ಡಿ.ಕೆ. ಶಿವಕುಮಾರ್‌ ವಾರಂಟ್‌ ಜಾರಿಗೊಳಿಸಿದ್ದರೂ ಕೋರ್ಟ್‌ಗೆ ಹಾಜರಾಗಿರಲಿಲ್ಲ. ಇದೀಗ ಎರಡನೇ ಬಾರಿ ವಾರಂಟ್‌ ಜಾರಿ ಆಗಿರುವ ಹಿನ್ನೆಲೆಯಲ್ಲಿ ಅವರು ಮಂಗಳವಾರ ಬೆಳಗ್ಗೆ 7 ಗಂಟೆಗೆ ವಿಮಾನ ಮೂಲಕ ಮಂಗಳೂರಿಗೆ ಬಂದು ಅಲ್ಲಿಂದ ಸುಳ್ಯಕ್ಕೆ ಆಗಮಿಸಿ, ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ. 

Related Video