ಮಾಡಾಳ್ ಲಂಚಾವತಾರ: ಸಿಎಂ ಬೊಮ್ಮಾಯಿ ರಾಜೀನಾಮೆಗೆ ಡಿಕೆಶಿ ಆಗ್ರಹ!
ಸಿಎಂ ಬೊಮ್ಮಾಯಿ ಸಾಕ್ಷ್ಯ ಕೇಳ್ತಾ ಇದ್ದರು, ಹಣ ಪತ್ತೆ ಬಗ್ಗೆ ಲೋಕಾಯುಕ್ತ ಅಧಿಕಾರಿಗಳೇ ಸಾಕ್ಷ್ಯ ಕೊಟ್ಟಿದ್ದಾರೆ. ಶಾಸಕರ ಕಚೇರಿ, ಮನೆಯಲ್ಲಿ ಲಕ್ಷಾಂತರ ರೂ. ಸಿಕ್ಕಿದೆ. ಹೀಗಾಗಿ ಸಿಎಂ ಬಸವರಾಜ ಬೊಮ್ಮಾಯಿ ಈ ಕೂಡಲೇ ರಾಜೀನಾಮೆ ನೀಡಬೇಕು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್
ಬೆಂಗಳೂರು(ಮಾ.03): ಲೋಕಾಯುಕ್ತ ಅಧಿಕಾರಿಗಳನ್ನ ಅಭಿನಂದಿಸುತ್ತೇನೆ. ಸಿಎಂ ಬೊಮ್ಮಾಯಿ ಸಾಕ್ಷ್ಯ ಕೇಳ್ತಾ ಇದ್ದರು, ಹಣ ಪತ್ತೆ ಬಗ್ಗೆ ಲೋಕಾಯುಕ್ತ ಅಧಿಕಾರಿಗಳೇ ಸಾಕ್ಷ್ಯ ಕೊಟ್ಟಿದ್ದಾರೆ. ಶಾಸಕರ ಕಚೇರಿ, ಮನೆಯಲ್ಲಿ ಲಕ್ಷಾಂತರ ರೂ. ಸಿಕ್ಕಿದೆ. ಹೀಗಾಗಿ ಸಿಎಂ ಬಸವರಾಜ ಬೊಮ್ಮಾಯಿ ಈ ಕೂಡಲೇ ರಾಜೀನಾಮೆ ನೀಡಬೇಕು ಅಂತ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಗ್ರಹಿಸಿದ್ದಾರೆ. ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರನ ಕಚೇರಿ, ಮನೆ ಲೋಕಾಯುಕ್ತ ದಾಳಿ ನಡೆಸಿದ್ದರ ಬಗ್ಗೆ ಮಾತನಾಡಿದ ಡಿಕೆಶಿ, ಲೋಕಾಯುಕ್ತ ಅಧಿಕಾರಿಗಳು ಒಳ್ಳೆಯ ಕೆಲಸವನ್ನ ಮಾಡಿದ್ದಾರೆ ಅವರಿಗೆ ಅಭಿನಂದಿಸುತ್ತೇನೆ ಅಂತ ಹೇಳಿದ್ದಾರೆ.
ಶಿವಾಜಿ ಪ್ರತಿಮೆ ಉದ್ಘಾಟಿಸಿದ ಸಿಎಂ ಬೊಮ್ಮಾಯಿ, ಮಾ.5ಕ್ಕೆ ಇದೇ ಪ್ರತಿಮೆಯನ್ನು ಕಾಂಗ್ರೆಸ್‌ನಿಂದ ಉದ್ಘಾಟನೆ!