ಕೆಆರ್‌ಎಸ್ ಡ್ಯಾಂನಲ್ಲಿ ಯಾವುದೇ ಬಿರುಕಿಲ್ಲ, ಮಂಡ್ಯ ರಾಜಕಾರಣದ ಬಗ್ಗೆ ಮಾತಾಡಲ್ಲ: ನಿರಾಣಿ
' ಕೆಆರ್‌ಎಸ್ ಡ್ಯಾಂನಲ್ಲಿ ಯಾವುದೇ ಬಿರುಕು ಬಿಟ್ಟಿಲ್ಲ. ಹಾನಿಯಾಗಿಲ್ಲ. ಇನ್ನು ಮಂಡ್ಯ ರಾಜಕಾರಣದ ಬಗ್ಗೆ ಮಾತನಾಡುವುದಿಲ್ಲ' ಎಂದು ಗಣಿ ಸಚಿವ ಮುರುಗೇಶ್ ನಿರಾಣಿ ಹೇಳಿದ್ಧಾರೆ.
ಬೆಂಗಳೂರು (ಜು. 11): ಕೆಆರ್‌ಎಸ್ ಬಿರುಕು ವಿಚಾರವಾಗಿ ಎಚ್‌ಡಿಕೆ- ಸುಮಲತಾ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಪರ ವಿರೋಧ ಚರ್ಚೆಗಳೂ ಜೋರಾಗಿದೆ. ರಾಜಕೀಯ ನಾಯಕರು ಪ್ರತಿಕ್ರಿಯಿಸುತ್ತಿದ್ದಾರೆ. ' ಕೆಆರ್‌ಎಸ್ ಡ್ಯಾಂನಲ್ಲಿ ಯಾವುದೇ ಬಿರುಕು ಬಿಟ್ಟಿಲ್ಲ. ಹಾನಿಯಾಗಿಲ್ಲ. ಇನ್ನು ಮಂಡ್ಯ ರಾಜಕಾರಣದ ಬಗ್ಗೆ ಮಾತನಾಡುವುದಿಲ್ಲ' ಎಂದು ಗಣಿ ಸಚಿವ ಮುರುಗೇಶ್ ನಿರಾಣಿ ಹೇಳಿದ್ಧಾರೆ.