ನಾಳೆ ಸಾರಿಗೆ ನೌಕರರಿಂದ ಬೃಹತ್‌ ಪ್ರತಿಭಟನೆಗೆ ನಿರ್ಧಾರ: ಬಸ್‌ ಸಂಚಾರ ಸ್ತಬ್ಧವಾಗುತ್ತಾ?

ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯ ಹೊತ್ತಿನಲ್ಲಿ ಸರ್ಕಾರಕ್ಕೆ ಸಾಲು ಸಾಲು ಪ್ರತಿಭಟನೆ ಎದುರಾಗುತ್ತಿದ್ದು, ನಾಳೆ ಸಾರಿಗೆ ನೌಕರರಿಂದ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಯಲಿದೆ.
 

Share this Video
  • FB
  • Linkdin
  • Whatsapp

ಆರು ವರ್ಷ ಕಳೆದರೂ ವೇತನ ಹೆಚ್ಚಳ ಮಾಡದ ಸರ್ಕಾರದ ಧೋರಣೆ ಖಂಡಿಸಿ ಬೀದಿಗಿಳಿಯಲು ಸಾರಿಗೆ ನೌಕರರು ತೀರ್ಮಾನ ಮಾಡಿದ್ದಾರೆ. ಸರ್ಕಾರದ ಗಮನ ಸೆಳೆಯಲು ಬೃಹತ್‌ ಪ್ರತಿಭಟನೆಗೆ ನಿರ್ಧಾರ ಮಾಡಲಾಗಿದ್ದು, ಅನಂತ ಸುಬ್ಬರಾವ್‌ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ಈ ಪ್ರತಿಭಟನೆಗೆ ಸಾರಿಗೆ ಇಲಾಖೆಯಿಂದ ತೀವ್ರ ವಿರೋಧ ಇದ್ದು, ಸಾರಿಗೆ ನೌಕರರಿಗೆ ಶಿಸ್ತು ಕ್ರಮದ ಎಚ್ಚರಿಕೆ ನೀಡಲಾಗಿದೆ. ಸಾರಿಗೆ ನಿಗಮದ ಕರ್ತವ್ಯಕ್ಕೆ ಗೈರಾದರೆ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಲಾಗಿದೆ. ಪ್ರತಿಭಟನೆಯಲ್ಲಿ ಭಾಗಿಯಾಗದೆ ಕರ್ತವ್ಯಕ್ಕೆ ಹಾಜರಾಗಲು ಎಲ್ಲಾ ಸಾರಿಗೆ ಸಿಬ್ಬಂದಿಗೆ ವಿಭಾಗೀಯ ಡಿಸಿಗಳಿಂದ ಎಚ್ಚರಿಕೆಯ ಸೂಚನೆ ನೀಡಲಾಗಿದೆ.

Related Video