ಅರಬ್ಬೀ ಸಮುದ್ರದಲ್ಲಿ ಕ್ಯಾರ್ ಹಾವಳಿ; ಅಬ್ಬರಕ್ಕೆ ಬೆಚ್ಚಿಬಿತ್ತು ಕರಾವಳಿ

ರಾಜ್ಯ ಕರಾವಳಿಗೆ ಕ್ಯಾರ್ ಚಂಡಮಾರುತ ಅಪ್ಪಳಿಸಿದೆ. ಕ್ಯಾರ್ ಅಬ್ಬರಕ್ಕೆ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆ ಜನಜೀವನ ಅಸ್ತವ್ಯಸ್ತವಾಗಿದೆ. ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಕ್ಯಾರ್ ತೀವ್ರತೆಯೂ ಹೆಚ್ಚಾಗಿದೆ.  ಕರಾವಳಿ ಜಿಲ್ಲೆಗಳಲ್ಲಿ ಸಮುದ್ರ ತಟದಲ್ಲಿರುವ ಮನೆಗಳಿಗೆ ಅಲೆಗಳು ಅಪ್ಪಳಿಸುತ್ತಿವೆ, ಸುಂಟರಗಾಳಿ ಜನರಲ್ಲಿ ಆತಂಕ ಸೃಷ್ಟಿಸಿದೆ, ಒಂದು ಕ್ಷಣ ವಿರಾಮವಿಲ್ಲದೆ ಸುರಿಯುತ್ತಿರುವ ಮಳೆಗೆ ಜನ ಹೈರಾಣಾಗಿದ್ದಾರೆ. ಇಲ್ಲಿದೆ ಮತ್ತಷ್ಟು ವಿವರ...  
 

First Published Oct 26, 2019, 1:03 PM IST | Last Updated Oct 26, 2019, 1:03 PM IST

ಮಂಗಳೂರು (ಅ.26): ರಾಜ್ಯ ಕರಾವಳಿಗೆ ಕ್ಯಾರ್ ಚಂಡಮಾರುತ ಅಪ್ಪಳಿಸಿದೆ. ಕ್ಯಾರ್ ಅಬ್ಬರಕ್ಕೆ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆ ಜನಜೀವನ ಅಸ್ತವ್ಯಸ್ತವಾಗಿದೆ. 

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಕ್ಯಾರ್ ತೀವ್ರತೆಯೂ ಹೆಚ್ಚಾಗಿದೆ. ಕರಾವಳಿಯಲ್ಲಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.  

ಕರಾವಳಿ ಜಿಲ್ಲೆಗಳಲ್ಲಿ ಸಮುದ್ರ ತಟದಲ್ಲಿರುವ ಮನೆಗಳಿಗೆ ಅಲೆಗಳು ಅಪ್ಪಳಿಸುತ್ತಿವೆ, ಸುಂಟರಗಾಳಿ ಜನರಲ್ಲಿ ಆತಂಕ ಸೃಷ್ಟಿಸಿದೆ, ಒಂದು ಕ್ಷಣ ವಿರಾಮವಿಲ್ಲದೆ ಸುರಿಯುತ್ತಿರುವ ಮಳೆಗೆ ಜನ ಹೈರಾಣಾಗಿದ್ದಾರೆ. ಇಲ್ಲಿದೆ ಮತ್ತಷ್ಟು ವಿವರ...