ತಲಕಾವೇರಿಯಲ್ಲಿ ಅರ್ಚಕರ ಮನೆ ಮೇಲೆ ಗುಡ್ಡ ಕುಸಿತ: ನಾಲ್ವರು ಕಾಣೆ

ಕೊಡಗು ಜಿಲ್ಲೆಯ ಭಾಗಮಂಡಲ ವ್ಯಾಪ್ತಿಯ ತಲಕಾವೇರಿಯಲ್ಲಿ ನಿನ್ನೆ ತಡರಾತ್ರಿ ಸುರಿದ ಮಳೆಗೆ ತಲಕಾವೇರಿಯ ಬ್ರಹ್ಮಗಿರಿ ಬೆಟ್ಟದ ಒಂದು ಭಾಗ ಜರಿದು ತಲಕಾವೇರಿಯ ದೇವಸ್ಥಾನದ ಅರ್ಚಕರುಗಳ ಎರಡು ಮನೆ ಮೇಲೆ ಬಿದ್ದಿದೆ. 
 

First Published Aug 6, 2020, 2:59 PM IST | Last Updated Aug 6, 2020, 2:59 PM IST

ಬೆಂಗಳೂರು (ಆ. 06): ಕೊಡಗು ಜಿಲ್ಲೆಯ ಭಾಗಮಂಡಲ ವ್ಯಾಪ್ತಿಯ ತಲಕಾವೇರಿಯಲ್ಲಿ ನಿನ್ನೆ ತಡರಾತ್ರಿ ಸುರಿದ ಮಳೆಗೆ ತಲಕಾವೇರಿಯ ಬ್ರಹ್ಮಗಿರಿ ಬೆಟ್ಟದ ಒಂದು ಭಾಗ ಜರಿದು ತಲಕಾವೇರಿಯ ದೇವಸ್ಥಾನದ ಅರ್ಚಕರುಗಳ ಎರಡು ಮನೆ ಮೇಲೆ ಬಿದ್ದಿದೆ. 

ಜಿಲ್ಲಾ ಪ್ರಕೃತಿ ವಿಕೋಪ ನಿರ್ವಹಣಾ ತಂಡದ ತಕ್ಷಣ ಕಾರ್ಯಾಚರಣೆ ತಂಡವು ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ಕೈಗೊಂಡಿದ್ದು, ಅವರು ನೀಡಿರುವ ಪ್ರಾಥಮಿಕ ಮಾಹಿತಿ ಪ್ರಕಾರ, ಎರಡು ಮನೆಗಳ ಪೈಕಿ ಒಬ್ಬರು ಅರ್ಚಕರು ಹೊಸ ಮನೆ ನಿರ್ಮಿಸಿಕೊಂಡು ಕುಟುಂಬದೊಂದಿಗೆ ಭಾಗಮಂಡಲದಲ್ಲಿ ನೆಲೆಸಿರುತ್ತಾರೆ. ತಲಕಾವೇರಿಯ ಮನೆ ಖಾಲಿ ಇರುತ್ತದೆ. ಇನ್ನೊಬ್ಬ ಅರ್ಚಕರು ತಲಕಾವೇರಿಯ ಮನೆಯಲ್ಲಿಯೇ ಕುಟುಂಬದೊಂದಿಗೆ ವಾಸವಿರುತ್ತಾರೆ. 4 ಜನ ಕಾಣೆಯಾಗಿರುವ ಮಾಹಿತಿ ಇದೆ. 

ಮನೆ ಮೇಲೆ ಗುಡ್ಡ ಕುಸಿದು ತಲಕಾವೇರಿ ಅರ್ಚಕ ಕುಟುಂಬ ನಾಪತ್ತೆ

Video Top Stories