ಬಾಕಿ ಬಿಲ್‌ ಪಾವತಿಸಿ, ಇಲ್ಲ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ: ಸಿಎಂಗೆ ಗುತ್ತಿಗೆದಾರರ ಪತ್ರ!

ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ದೂರಿನ ಬಳಿಕ ಮತ್ತೊಂದು ಸಂಘದಿಂದ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಗುತ್ತಿಗೆದಾರರ ಸಂಘದಿಂದ ಆತ್ಮಹತ್ಯೆ ಮಾಡಿಕೊಳ್ಳುವ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆಯಲಾಗಿದೆ.

First Published Aug 24, 2022, 10:43 AM IST | Last Updated Aug 24, 2022, 10:43 AM IST

ಬೆಂಗಳೂರು (ಆ.24): ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ದೂರಿನ ಬಳಿಕ ಮತ್ತೊಂದು ಸಂಘದಿಂದ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಗುತ್ತಿಗೆದಾರರ ಸಂಘದಿಂದ ಆತ್ಮಹತ್ಯೆ ಮಾಡಿಕೊಳ್ಳುವ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆಯಲಾಗಿದೆ. ಬಾಕಿ ಇರುವ ಬಿಲ್ ಬಿಡುಗಡೆಗೊಳಿಸದೇ ಇದ್ದರೆ ಗುತ್ತಿಗೆದಾರರು ಆತ್ಮಹತ್ಯೆ ಹಾದಿ ಹಿಡಿಯುವ ಪರಿಸ್ಥಿತಿ ಉಂಟಾಗುತ್ತದೆ. ಪ್ರತಿಯೊಬ್ಬ ಗುತ್ತಿಗೆದಾರರು ತೀವ್ರ ಸಂಕಷ್ಟ ಹಾಗೂ ಹಣಕಾಸಿನ ತೊಂದರೆಯಿಂದ ಕಾಮಗಾರಿ ಸ್ಥಳಕ್ಕೆ ಹೋಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. 

ಕಟ್ಟಡ ಕಾಮಗಾರಿಗಳ ಉಪಕರಣ ನೀಡಿದ ವ್ಯಾಪಾರಿಗಳು, ಕಾರ್ಮಿಕರು, ಸಾಲ ನೀಡಿದ ಸಂಸ್ಥೆಗಳು ತೀವ್ರ ಒತ್ತಡ ಹೇರುತ್ತಿದ್ದಾರೆ. ಕೆಲ ಗುತ್ತಿಗೆದಾರರು ಒತ್ತಡದಿಂದ ಮನ ನೊಂದಿದ್ದಾರೆ. ಕೆಲವರು ಸಾಲಭಾದೆ ತಾಳಲಾರದೇ ಆತ್ಮಹತ್ಯೆಯಂತಹ ತೀರ್ಮಾನಕ್ಕೆ ಬಂದಿದ್ದಾರೆ. ಇನ್ನು ಗುತ್ತಿಗೆದಾರರು ಎಸ್.ಸಿ, ಎಸ್.ಟಿ. ಹಾಗೂ ಹಿಂದುಳಿದ ವರ್ಗಗಳ ಸಮುದಾಯದ ಮಕ್ಕಳ ವಸತಿ ಶಾಲೆಗಳ ಕಟ್ಟಡ ಕಾಮಗಾರಿಗಳನ್ನ ಮಾಡಿದ್ದಾರೆ. ಕಳೆದ ಏಳೆಂಟು ತಿಂಗಳಿದ ಬಾಕಿ ಪಾವತಿ ಬೆಳೆಯುತ್ತಲೇ ಇದೆ. ಸುಮಾರು 1200 ಕೋಟಿಯಷ್ಟು ಮೊತ್ತ ಗುತ್ತಿಗೆದಾರರಿಗೆ ಬಿಡುಗಡೆಯಾಗಬೇಕಿದೆ ಎಂದು ಗುತ್ತಿಗೆದಾರರ ಸಂಘ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.