Asianet Suvarna News Asianet Suvarna News

ಮೇ 3 ರ ನಂತರ ಲಾಕ್‌ಡೌನ್ ಮುಂದುವರೆಯುತ್ತಾ? ಸಾಧ್ಯಾಸಾಧ್ಯತೆಗಳಿವು!

ಎರಡನೇ ಹಂತದ ಲಾಕ್‌ಡೌನ್ ಅಂತ್ಯದ ನಂತರ ಅತಿ ಹೆಚ್ಚು ಸೋಂಕಿರುವ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಆರ್ಥಿಕ ಚಟುವಟಿಕೆ ನಡೆಸಲು ಅವಕಾಶ ನೀಡಲು ಲಾಕ್‌ಡೌನ್ ನಿಯಮ ಸಡಿಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.  

ಬೆಂಗಳೂರು (ಏ. 28): ಎರಡನೇ ಹಂತದ ಲಾಕ್‌ಡೌನ್ ಅಂತ್ಯದ ನಂತರ ಅತಿ ಹೆಚ್ಚು ಸೋಂಕಿರುವ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಆರ್ಥಿಕ ಚಟುವಟಿಕೆ ನಡೆಸಲು ಅವಕಾಶ ನೀಡಲು ಲಾಕ್‌ಡೌನ್ ನಿಯಮ ಸಡಿಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.  

ಕೊರೋನಾ ಮುಕ್ತ 9 ಜಿಲ್ಲೆಗಳಲ್ಲಿ ಉದ್ಯಮ ಆರಂಭಕ್ಕೆ ಸುತ್ತೋಲೆ

ಸೋಂಕು ಹೆಚ್ಚಿರುವ ಜಿಲ್ಲೆಗಳಲ್ಲಿ ಮೇ 15 ರವರೆಗೆ ಲಾಕ್‌ಡೌನ್ ಮುಂದುವರೆಸುವ ಕೇಂದ್ರದ ಚಿಂತನೆಗೆ ಸಿಎಂ ಯಡಿಯೂರಪ್ಪ ಸಹಮತ ವ್ಯಕ್ತಪಡಿಸಿದ್ದಾರೆ. ವಲಯವಾರು ಸಡಿಲಿಕೆಗೆ ಅವಕಾಶ ನೀಡಬೇಕೆಂದು ಪ್ರಧಾನಿಯವರಲ್ಲಿ ಮನವಿ ಮಾಡಿದ್ದಾರೆ.