ರಾಜ್ಯಪಾಲರ ಭೇಟಿಗಾಗಿ ಪಟ್ಟು; ರೈಲು ನಿಲ್ದಾಣ ಬಿಟ್ಟು ಕದಲದ ರೈತರು

ಮಹದಾಯಿ ರೈತರ ಪ್ರತಿಭಟನೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮಳೆ-ಚಳಿಯ ನಡುವೆಯೂ ಮಹಿಳೆ, ಮಕ್ಕಳು ಸೇರಿದಂತೆ ರೈತರು ಪ್ರತಿಭಟನೆ ಮುಂದುವರೆಸಿದ್ದಾರೆ. ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣದಲ್ಲಿ ವಾಸ್ತವ್ಯ ಹೂಡಿರುವ ರೈತರು, ರಾಜ್ಯಪಾಲರ ಭೇಟಿಗಾಗಿ ಪಟ್ಟುಹಿಡಿದಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು (ಅ.18): ಮಹದಾಯಿ ರೈತರ ಪ್ರತಿಭಟನೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮಳೆ-ಚಳಿಯ ನಡುವೆಯೂ ಮಹಿಳೆ, ಮಕ್ಕಳು ಸೇರಿದಂತೆ ಸಾವಿರಾರು ರೈತರು ಪ್ರತಿಭಟನೆ ಮುಂದುವರೆಸಿದ್ದಾರೆ.

ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣದಲ್ಲಿ ವಾಸ್ತವ್ಯ ಹೂಡಿರುವ ರೈತರು, ರಾಜ್ಯಪಾಲರ ಭೇಟಿಗಾಗಿ ಪಟ್ಟುಹಿಡಿದಿದ್ದಾರೆ. ಮಹದಾಯಿ ನ್ಯಾಯಾಧೀಕರಣ ನೀಡಿರುವ ತೀರ್ಪಿನ ಗೆಜೆಟ್ ನೋಟಿಫಿಕೇಶನ್ ಮಾಡಬೇಕೆಂದು ರೈತರ ಆಗ್ರಹ. 

ರಾಜ್ಯಪಾಲರು ಕೂಡಲೇ ಮಧ್ಯಪ್ರವೇಶಿಸಬೇಕು, ಅವರನ್ನು ಭೇಟಿಯಾಗದೇ ಇಲ್ಲಿಂದ ಕದಲೋದಿಲ್ಲ ಎಂದು ರೈತರು ಪಟ್ಟು ಹಿಡಿದಿದ್ದಾರೆ.

Related Video