
ಮೂರನೇ ದಿನಕ್ಕೆ ಕಾಲಿಟ್ಟ ಮಹದಾಯಿ ಕಿಚ್ಚು; ಸರ್ಕಾರಕ್ಕೆ ರೈತರಿಂದ ಎಚ್ಚರಿಕೆ!
ಸರ್ಕಾರ ಕೂಡಲೇ ಮಹದಾಯಿ ನ್ಯಾಯಾಧೀಕರಣದ ತೀರ್ಪಿನ ಗೆಜೆಟ್ ನೋಟಿಫಿಕೆಶನ್ ಮಾಡಬೇಕೆಂದು ಒತ್ತಾಯಿಸಿ ಉತ್ತರ ಕರ್ನಾಟಕ ರೈತರು ಬೆಂಗಳೂರಿನಲ್ಲಿ ನಡೆಸುತ್ತಿರುವ ಪ್ರತಿಭಟನೆ ಮೂರನೇ ದಿನಕ್ಕೆ ಕಾಲಿಟ್ಟಿದೆ. ರಾಜ್ಯಪಾಲರನ್ನು ಭೇಟಿಯಾಗದೇ ಸ್ಥಳದಿಂದ ಕದಲಲ್ಲ ಎಂದು ರೈತರು ಪಟ್ಟುಹಿಡಿದಿದ್ದು, ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.
ಬೆಂಗಳೂರು (ಅ.19): ಸರ್ಕಾರ ಕೂಡಲೇ ಮಹದಾಯಿ ನ್ಯಾಯಾಧೀಕರಣದ ತೀರ್ಪಿನ ಗೆಜೆಟ್ ನೋಟಿಫಿಕೆಶನ್ ಮಾಡಬೇಕೆಂದು ಒತ್ತಾಯಿಸಿ ಉತ್ತರ ಕರ್ನಾಟಕ ರೈತರು ಬೆಂಗಳೂರಿನಲ್ಲಿ ನಡೆಸುತ್ತಿರುವ ಪ್ರತಿಭಟನೆ ಮೂರನೇ ದಿನಕ್ಕೆ ಕಾಲಿಟ್ಟಿದೆ.
ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಜಮಾಯಿಸಿರುವ ರೈತರು, ರಾಜ್ಯಪಾಲರನ್ನು ಭೇಟಿಯಾಗದೇ ಸ್ಥಳದಿಂದ ಕದಲಲ್ಲ ಎಂದು ಪಟ್ಟುಹಿಡಿದಿದ್ದು, ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.
ಸರ್ಕಾರ ನಮ್ಮ ಬೇಡಿಕೆಯನ್ನು ಈಡೇರಿಸದಿದ್ದರೆ, ಉಪವಾಸ ಸತ್ಯಾಗ್ರಹ ಆರಂಭಿಸುವುದಾಗಿ ರೈತ ನಾಯಕರು ಎಚ್ಚರಿಸಿದರು.