ಮಂಗಳೂರು ಗೋಲಿಬಾರ್‌ನಲ್ಲಿ ಮೃತಪಟ್ಟವರಿಗೆ ಪರಿಹಾರ ಇಲ್ಲ! ಆದೇಶ ಹಿಂಪಡೆದ ಸಿಎಂ

  • ಪೊಲೀಸ್‌ ಗೋಲಿಬಾರ್‌ನಲ್ಲಿ ಮೃತಪಟ್ಟವರಿಗಿಲ್ಲ ಪರಿಹಾರ
  • ಪರಿಹಾರ ಆದೇಶ ಹಿಂಪಡೆದ ಬಿ.ಎಸ್. ಯಡಿಯೂರಪ್ಪ
  • ಡಿ.19ರಂದು ಮಂಗಳೂರಿನಲ್ಲಿ ನಡೆದಿದ್ದ ಪೌರತ್ವ ಕಾಯ್ದೆ ವಿರುದ್ಧ ಪ್ರತಿಭಟನೆ 

Share this Video
  • FB
  • Linkdin
  • Whatsapp

ಮಂಗಳೂರು (ಡಿ.25): ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಮೃತಪಟ್ಟವರಿಗೆ ಪರಿಹಾರ ನೀಡುವ ಆದೇಶವನ್ನು ಹಿಂಪಡೆಯುವುದಾಗಿ ಸಿಎಂ ಬಿ.ಎಸ್. ಯಡಿಯೂರಪ್ಪ ಬುಧವಾರ ಪ್ರಕಟಿಸಿದರು.

ಪೊಲೀಸ್ ಗೋಲಿಬಾರ್‌ನಲ್ಲಿ ಮೃತಪಟ್ಟವರ ವಿರುದ್ಧವೂ ಪೊಲೀಸರು ಎಫ್‌ಐಆರ್ ದಾಖಲಿಸಿದ್ದು, ಅವರನ್ನು ಆರೋಪಿಗಳನ್ನಾಗಿ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಪರಿಹಾರ ಕೊಡುವುದು ಸರಿಯಲ್ಲ ಎಂದು ಸಿಎಂ ಹೇಳಿದರು.

ಕಳೆದ ಡಿ.19ರಂದು ಮಂಗಳೂರಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಡೆದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದ್ದು, ಪೊಲೀಸರ ಗುಂಡಿಗೆ ಇಬ್ಬರು ಬಲಿಯಾಗಿದ್ದರು. 
ಡಿಸೆಂಬರ್ 25ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Related Video