ರಾಯಣ್ಣ- ಶಿವಾಜಿ ಪ್ರತಿಮೆ ವಿವಾದ; ಪೊಲೀಸರ ಜೊತೆ ಮರಾಠಿಗರ ವಾಗ್ವಾದ, ಸ್ಥಳದಲ್ಲಿ ಬಿಗುವಿನ ವಾತಾವರಣ
ಬೆಳಗಾವಿಯ ಪೀರನವಾಡಿ ಗ್ರಾಮದ ವಿವಾದಿತ ಸ್ಥಳದಲ್ಲಿಯೇ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ. ಇದನ್ನು ವಿರೋಧಿಸಿ ಮರಾಠಿಗರು ರಾಯಣ್ಣ ಮೂರ್ತಿಯ ಕೂಗಳತೆ ದೂರದಲ್ಲಿ ಶಿವಾಜಿ ಪ್ರತಿಮೆಯ ಪ್ರತಿಷ್ಠಾಪನೆಗೆ ಮುಂದಾಗಿದ್ದಾರೆ.
ಬೆಳಗಾವಿ (ಆ. 28): ತಾಲೂಕಿನ ಪೀರನವಾಡಿ ಗ್ರಾಮದ ವಿವಾದಿತ ಸ್ಥಳದಲ್ಲಿಯೇ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ. ಇದನ್ನು ವಿರೋಧಿಸಿ ಮರಾಠಿಗರು ರಾಯಣ್ಣ ಮೂರ್ತಿಯ ಕೂಗಳತೆ ದೂರದಲ್ಲಿ ಶಿವಾಜಿ ಪ್ರತಿಮೆಯ ಪ್ರತಿಷ್ಠಾಪನೆಗೆ ಮುಂದಾಗಿದ್ದಾರೆ.
ಪೊಲೀಸರು ಶಿವಾಜಿ ಮೂರ್ತಿಯನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರ ಜೊತೆ ಮರಾಠಿಗರು ವಾಗ್ವಾದಕ್ಕಿಳಿದ್ದಾರೆ. ಒಂದು ಕಡೆ ಹೋರಾಟಗಾರರು ರಾಯಣ್ಣ ಪ್ರತಿಮೆಯನ್ನು ರಾತ್ರೋರಾತ್ರಿ ಪ್ರತಿಷ್ಠಾಪಿಸಿದ್ದಾರೆ. ಇದನ್ನು ವಿರೋಧಿಸಿ ಮರಾಠಿಗರು ಶಿವಾಜಿ ಮೂರ್ತಿ ಸ್ಥಾಪನೆಗೆ ಮುಂದಾಗಿದ್ದಾರೆ. ಪೊಲೀಸರು ವಶಕ್ಕೆ ಪಡೆದಿದ್ದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಬೆಳಗಾವಿ: ವಿವಾದಿತ ಸ್ಥಳದಲ್ಲೇ ರಾಯಣ್ಣನ ಪ್ರತಿಮೆ ಪ್ರತಿಷ್ಠಾಪನೆ, ಅಭಿಮಾನಿಗಳಿಂದ ಸಂಭ್ರಮಾಚರಣೆ