Asianet Suvarna News Asianet Suvarna News

ಕರ್ನಾಟಕದಲ್ಲಿ ಕೊರೋನಾ 4ನೇ ಅಲೆ ರೂಲ್ಸ್, ಮತ್ತೆ ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯ

ಕೋವಿಡ್ 4ನೇ ಅಲೆ ಹೆಚ್ಚಾಗುತ್ತಿರುವ ಹಿನ್ನೆಲೆ ಕರ್ನಾಟಕದಲ್ಲಿ ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಪಾಲನೆ ಮಾಡುವುದು ಕಡ್ಡಾಯವಾಗಲಿದೆ. ಈ ಬಗ್ಗೆ ಅಧಿಕೃತವಾಗಿ ಮಾರ್ಗಸೂಚಿ ಹೊರಡಿಸಲಾಗುವುದು ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು, (ಏ.25): ಕೋವಿಡ್ 4ನೇ ಅಲೆ ಹೆಚ್ಚಾಗುತ್ತಿರುವ ಹಿನ್ನೆಲೆ ಕರ್ನಾಟಕದಲ್ಲಿ ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಪಾಲನೆ ಮಾಡುವುದು ಕಡ್ಡಾಯವಾಗಲಿದೆ. ಈ ಬಗ್ಗೆ ಅಧಿಕೃತವಾಗಿ ಮಾರ್ಗಸೂಚಿ ಹೊರಡಿಸಲಾಗುವುದು ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಸ್ಪಷ್ಟಪಡಿಸಿದ್ದಾರೆ.

ಕರ್ನಾಟಕದಲ್ಲಿ ಕೊರೋನಾ 4ನೇ ಅಲೆ ಪ್ರಾರಂಭ, ಒಮಿಕ್ರೋನ್ ಉಪತಳಿಯಿಂದ ಸೋಂಕು!

ಕೊರೋನಾ  4ನೇ ಅಲೆ ಭೀತಿ ಹಿನ್ನೆಲೆಯಲ್ಲಿ ಸಿಎಂ ಗೃಹ ಕಚೇರಿಯಲ್ಲಿ ಇಂದು (ಸೋಮವಾರ) ಮಹತ್ವದ ಸಭೆ ನಡೆದಿದ್ದು, ಕೊರೋನಾ ನಾಲ್ಕನೇ ಅಲೆಯ ತೀವ್ರತೆ ಮತ್ತು ಸ್ಥಿತಿಗತಿಗಳ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಜ್ಞರ ಜೊತೆ ಚರ್ಚೆ ನಡೆಸಿದರು. ಸಭೆ ಬಳಿಕ ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಪಾಲನೆ  ಬಗ್ಗೆ ಮಾಹಿತಿ ನೀಡಿದರು.