Asianet Suvarna News Asianet Suvarna News

ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಎಂ.ಬಿ.ಪಾಟೀಲ್ ಪದಗ್ರಹಣ ಸಮಾರಂಭ

ಕರ್ನಾಟಕ ಕಾಂಗ್ರೆಸ್ ಸಮಿತಿಯ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಹಿರಿಯ ಶಾಸಕ ಎಂ. ಬಿ. ಪಾಟೀಲ್ ಸೋಮವಾರ ಅಧಿಕಾರ ಸ್ವೀಕರಿಸಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಸಮಾವೇಶ ಆಯೋಜನೆ ಮಾಡಲಾಗಿತ್ತು. 

First Published Mar 28, 2022, 9:30 PM IST | Last Updated Mar 28, 2022, 9:30 PM IST

ಬೆಂಗಳೂರು (ಮಾ.28): ಕರ್ನಾಟಕ ಕಾಂಗ್ರೆಸ್ ಸಮಿತಿಯ ಪ್ರಚಾರ ಸಮಿತಿ ಅಧ್ಯಕ್ಷರಾಗಿ (KPCC) ಹಿರಿಯ ಶಾಸಕ ಎಂ. ಬಿ. ಪಾಟೀಲ್ (Senior Leader MB Patil) ಸೋಮವಾರ ಅಧಿಕಾರ ಸ್ವೀಕರಿಸಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಸಮಾವೇಶ ಆಯೋಜನೆ ಮಾಡಲಾಗಿತ್ತು. ಈ ವೇಳೆ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ತಿಂಗಳ ಬಳಿಕ ಅಧಿಕೃತವಾಗಿ ಜವಾಬ್ದಾರಿ ತೆಗೆದುಕೊಂಡರು. ಮಾಜಿ ಸಿಎಂ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಸೇರಿದಂತೆ ಕೆಪಿಸಿಸಿ ಕಾರ್ಯಾಧ್ಯಕ್ಷರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷದ ಬಾವುಟ ಸ್ವೀಕರಿಸುವ ಮೂಲಕ ಮುಂದಿನ ವರ್ಷ ನಡೆಯುವ ವಿಧಾನಸಭೆ ಚುನಾವಣೆಗೆ ಕಹಳೆ ಊದಿದರು. 

ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಎಂಬಿ ಪಾಟೀಲ್ ಪದಗ್ರಹಣ!

ಭಾರತ್ ಮಾತಾ ಕಿ ಜೈ ಎನ್ನುತ್ತಲೇ ಭಾಷಣ ಆರಂಭಿಸಿದ ಎಂಬಿ ಪಾಟೀಲ್, ಬಿಜೆಪಿಯ (BJP) ಯಾರೊಬ್ಬರೂ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿಲ್ಲ. ಇಂಥ ಪಕ್ಷ ಈಗ ನಮಗೆ ರಾಷ್ಟ್ರೀಯತೆಯ ಪಾಠ ಮಾಡಲು ಬಂದಿದೆ. ಸರ್ವರಿಗೂ ಸಮಪಾಲು ಸಿದ್ಧಾಂತವನ್ನು ನಂಬಿರುವ ಕಾಂಗ್ರೆಸ್ ಪಕ್ಷ, ಈ ದೇಶ ಕಟ್ಟುವಲ್ಲಿ ನೀಡಿದ ಕೊಡುಗೆಯನ್ನು ಯಾರೊಬ್ಬರೂ ಮರೆಯುವಂತಿಲ್ಲ ಎಂದು ಹೇಳಿದರು. ಇಂದು ಅಧಿಕಾರಕ್ಕೋಸ್ಕರ ಬಿಜೆಪಿ ಸಮಾಜದ ನಡುವೆ ಸಂಘರ್ಷ ಮೂಡಿಸುವ ಕೆಲಸ ಮಾಡುತ್ತಿದೆ. ಆದರೆ, ಕಾಂಗ್ರೆಸ್ ಪಕ್ಷ ಸಮಾಜವನ್ನು ಕಟ್ಟುವ ಕೆಲಸ ಮಾಡಲಿದೆ. ಜಾತಿ ಧರ್ಮದ ಹೆಸರಿನಲ್ಲಿ ಸಮಾಜ ಒಡೆಯಲು ನಾವು ಬಿಡುವುದಿಲ್ಲ ಎಂದು ಎಂಬಿ ಪಾಟೀಲ್ ಹೇಳಿದರು. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.