Asianet Suvarna News Asianet Suvarna News

ಸಿಎಂ ಸಭೆ ಸಕ್ಸಸ್: ಈಗಲಾದ್ರೂ ಸರಿಯಾದ ಸಮಯಕ್ಕೆ ರೋಗಿಗಳಿಗೆ ಚಿಕಿತ್ಸೆ ದೊರೆಯುತ್ತಾ..?

ಖಾಸಗಿ ವೈದ್ಯಕೀಯ ಕಾಲೇಜುಗಳ ಮುಖ್ಯಸ್ಥರೊಂದಿಗೆ ಸಿಎಂ ಬಿಎಸ್ ಯಡಿಯೂರಪ್ಪ ನಡೆಸಿದ ಸಭೆ ಸಕ್ಸಸ್ ಆಗಿದೆ.

ಬೆಂಗಳೂರು, (ಜುಲೈ.18):ರಾಜ್ಯದಲ್ಲಿ ಕೊರೋನಾ ಮಹಾಮಾರಿಯ ಸೋಂಕಿನ ಪ್ರಮಾಣ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಮತ್ತೊಂದೆಡೆ ಆಸ್ಪತ್ರೆಗಳಲ್ಲಿ ಬೆಡ್, ಅಂಬ್ಯುಲೆನ್ಸ್ ಸಮಸ್ಯೆಗಳು ಎದುರಾಗಿವೆ. ಈ ಹಿನ್ನೆಲೆಯಲ್ಲಿ ಸೋಂಕಿತರಿಗೆ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ ಸಾವನ್ನಪ್ಪುತ್ತಿದ್ದಾರೆ.

10 ಆಸ್ಪತ್ರೆ ಸುತ್ತಿದ್ರೂ ಬದುಕಲಿಲ್ಲ:ಕಂದಮ್ಮನ ಫೋಟೋ ಹಿಡಿದು CM ಮನೆ ಮುಂದೆ ಅಪ್ಪನ ಕಣ್ಣೀರು

ಮತ್ತೊಂದೆಡೆ ಖಾಸಗಿ ಆಸ್ಪತ್ರೆಗಳು ಸಹ ಕೋವಿಡ್-19 ಚಿಕಿತ್ಸೆಗೆ ಸಂಬಂಧಿಸಿದಂತೆ ಸರ್ಕಾರದ ಆದೇಶಕ್ಕೆ ಕಿಮ್ಮತ್ತು ನೀಡುತ್ತಿಲ್ಲ. ಇದರಿಂದ ರೊಚ್ಚಿಗೆದ್ದ ಸಿಎಂ ಇಂದು (ಶನಿವಾರ) ಖಾಸಗಿ ವೈದ್ಯಕೀಯ ಕಾಲೇಜುಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಿದ್ದು, ಅವರಿಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಇದಕ್ಕೆ ಖಾಸಗಿ ವೈದ್ಯಕೀಯ ಕಾಲೇಜುಗಳು ಮಣಿದಿವೆ.
 

Video Top Stories