ಮದುವೆ ಸಮಾರಂಭದಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ಎಂಇಎಸ್ ಪುಂಡರಿಂದ ಗೂಂಡಾಗಿರಿ!

ಬೆಳಗಾವಿ ತಾಲೂಕಿನ ಧಾಮನೆ ಗ್ರಾಮದಲ್ಲಿ ತಡರಾತ್ರಿ ನಡೆದ ಘಟನೆ ನಡೆದಿದ್ದು  ಮದುವೆ ಮೆರವಣಿಗೆ ಮೇಲೆ ಎಂಇಎಸ್ ಪುಂಡರು ಅಟ್ಟಹಾಸ ಮೆರೆದಿದ್ದಾರೆ. ಬೆಳಗಾವಿ ಗ್ರಾಮೀಣ ಠಾಣೆ ಪೊಲೀಸರು ಪ್ರಕರಣದಲ್ಲಿ 10 ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
 

First Published May 27, 2022, 5:32 PM IST | Last Updated May 27, 2022, 5:32 PM IST

ಬೆಳಗಾವಿ (ಮೇ. 27): ಬೆಳಗಾವಿಯಲ್ಲಿ (Belagavi) ಮತ್ತೆ ಎಂಇಎಸ್ ಗೂಂಡಾಗಳು (MES Goons) ಪುಂಡಾಟಿಕೆ ಮೆರೆದಿದ್ದಾರೆ. ಮದುವೆ ಕಾರ್ಯಕ್ರಮದಲ್ಲಿ ಕನ್ನಡ ಹಾಡು (Kannada Song) ಹಾಕಿದ್ದಕ್ಕೆ, ನವ ದಂಪತಿಗಳ (Newly Married Couple ) ಮೇಲೆ ಹಲ್ಲೆ ನಡೆಸಿದ್ದು ಮಾತ್ರವಲ್ಲದೆ, ಇಡೀ ಮದುವೆ ಕಾರ್ಯಕ್ರಮದಲ್ಲಿ ದಾಂಧಲೆ ನಡೆಸಿದ್ದಾರೆ.

ವಧು, ವರ ಮಾತ್ರವಲ್ಲದೆ ಕಾರ್ಯಕ್ರಮದಲ್ಲಿದ್ದ ಕನ್ನಡಿಗರ ಮೇಲೂ ಎಂಇಎಸ್ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ. ಬೆಳಗಾವಿ ತಾಲೂಕಿನ ಧಾಮನೆ ಗ್ರಾಮದಲ್ಲಿ ತಡರಾತ್ರಿ ನಡೆದ ಘಟನೆ ನಡೆದಿದೆ. ವರ ಸಿದ್ಧು ಸೈಬಣ್ಣವರ್, ವಧು ರೇಷ್ಮಾ ಸೇರಿದಂತೆ ಐವರ ಮೇಲೆ ಹಲ್ಲೆ ನಡೆಸಲಾಗಿದೆ.

ಮದ್ವೆ ಮನೆಗೆ ಹೊರಟಿದ್ದರವರು ಮಸಣಕ್ಕೆ, ಸಂಭ್ರಮ ತುಂಬಿದ್ದ ಮನೆಯಲ್ಲಿ ಸೂತಕದ ಛಾಯೆ!

ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಳಗಾವಿ ಗ್ರಾಮೀಣ ಠಾಣೆ ಪೊಲೀಸರು ಪ್ರಕರಣದಲ್ಲಿ 10 ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ತಡರಾತ್ರಿ ನಡೆದ ಮೆರವಣಿಗೆಯಲ್ಲಿ ಕನ್ನಡ ಹಾಡಿಗೆ ನಾಡಧ್ವಜ ಹಿಡಿದು ಡಾನ್ಸ್ ಮಾಡಿದ್ದರು. ಈ ಕಾರಣಕ್ಕೆ ಇವರ ಮೇಲೆ ಹಲ್ಲೆ ನಡೆಸಲಾಗಿದೆ.