Shivamogga: ಮಾನವೀಯತೆ ಮೆರೆದ ಗೃಹ ಸಚಿವ ಆರಗ ಜ್ಞಾನೇಂದ್ರ: ಗಾಯಾಳು ರಕ್ಷಣೆ

ತೀರ್ಥಹಳ್ಳಿ ತಾಲೂಕಿನ ಬೇಗುವಳ್ಳಿ ಸಮೀಪ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನನ್ನು ತಮ್ಮ ಬೆಂಗಾವಲು ವಾಹನದಲ್ಲಿ ಆಸ್ಪತ್ರೆಗೆ ಕಳುಹಿಸಿ ಕೊಡುವ ಮೂಲಕ ಗೃಹ ಸಚಿವ ಆರಗ ಜ್ಞಾನೇಂದ್ರ ಮಾನವೀಯತೆ ಮೆರೆದಿದ್ದಾರೆ. 

Share this Video
  • FB
  • Linkdin
  • Whatsapp

ಶಿವಮೊಗ್ಗ (ಮಾ.03): ತೀರ್ಥಹಳ್ಳಿ ತಾಲೂಕಿನ ಬೇಗುವಳ್ಳಿ ಸಮೀಪ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನನ್ನು ತಮ್ಮ ಬೆಂಗಾವಲು ವಾಹನದಲ್ಲಿ ಆಸ್ಪತ್ರೆಗೆ ಕಳುಹಿಸಿ ಕೊಡುವ ಮೂಲಕ ಗೃಹ ಸಚಿವ ಆರಗ ಜ್ಞಾನೇಂದ್ರ ಮಾನವೀಯತೆ ಮೆರೆದಿದ್ದಾರೆ. ರಸ್ತೆಯಲ್ಲಿ ಹಸು ಅಡ್ಡ ಬಂದ ಪರಿಣಾಮ, ಹಸುವಿಗೆ ಬೈಕ್ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಸವಾರ ಬಿದ್ದು ಗಂಭೀರ ಗಾಯಗೊಂಡಿದ್ದಾನೆ. ಗಾಯಗೊಂಡಿದ್ದ ಹಲಗ ಮನೋಜ್ (32) ಯುವಕನನ್ನು ಸಿಂಗನಬಿದರೆ ಹಳಗ ಗ್ರಾಮದ ನಿವಾಸಿ ಎನ್ನಲಾಗಿದೆ. ರಸ್ತೆ ಬದಿಯಲ್ಲಿ ಗಾಯಾಳು ಯುವಕ ನರಳುತ್ತಿದ್ದ. ಈ ವೇಳೆ ಅದೇ ಮಾರ್ಗದಲ್ಲಿ ಬೆಂಗಳೂರಿಗೆ ಹೊರಟಿದ್ದ ಸಚಿವ, ಗಾಯಾಳು ಯುವಕನನ್ನು ಗಮನಿಸಿ ತಮ್ಮ ವಾಹನ ನಿಲ್ಲಿಸಿದ್ದಾರೆ. ಗಾಯಾಳು ಯುವಕನನ್ನು ಉಪಚರಿಸಿ, ಧೈರ್ಯ ಹೇಳಿದ್ದಾರೆ. ಅಲ್ಲದೇ ತಮ್ಮ ಬೆಂಗಾವಲು ವಾಹನದಲ್ಲಿ ಗಾಯಾಳು ಯುವಕನನ್ನು ಆಸ್ಪತ್ರೆಗೆ ಕಳುಹಿಸಿ ಕೊಟ್ಟಿದ್ದಾರೆ. ಇನ್ನು ಸಚಿವರ ಕಾಳಜಿಯನ್ನು ಸಾರ್ವಜನಿಕರು ಶ್ಲಾಘಿಸಿದ್ದಾರೆ.

Related Video