ಡಿಕಿಶಿಗೆ ನನ್ನ ಮೇಲೆ ವಿಶೇಷ ಕಾಳಜಿ ಇದೆ: ಸಚಿವ ಡಾ. ಕೆ. ಸುಧಾಕರ್
'ಪತ್ರಕರ್ತನೊಂದು ಸಂಪರ್ಕದಲ್ಲಿದ್ದ ಸುಧಾಕರ್ ಕ್ವಾರಂಟೈನ್ ಆಗಲಿ...' ಎಂದ ಡಿಕೆಶಿ ಮಾತಿಗೆ ಸುವರ್ಣ ನ್ಯೂಸ್‌ಗೆ ಸ್ವತಃ ವೈದ್ಯಕೀಯ ಸಚಿವ ಡಾ.ಕೆ ಸುಧಾಕರ್ ಇಂದು ಪ್ರತಿಕ್ರಿಯೆ ನೀಡಿದ್ದು, ಡಿ.ಕೆ. ಶಿವಕುಮಾರ್ ಅವರಿಗೆ ನನ್ನ ಮೇಲೆ ವಿಶೇಷ ಪ್ರೀತಿ-ಅಭಿಮಾನವಿದೆ. ನನ್ನ ಆರೋಗ್ಯದ ಬಗ್ಗೆ ಕಾಳಜಿ ವಹಿಸಿದ್ದಕ್ಕೆ ನಾನು ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಸುಧಾಕರ್ ತಿಳಿಸಿದ್ದಾರೆ.
ಬೆಂಗಳೂರು(ಏ.30): ಕೊರೋನಾ ಸೋಂಕಿತ ಪತ್ರಕರ್ತನೊಂದಿಗೆ ಸಚಿವರು ಸಂಪರ್ಕದಲ್ಲಿದ್ದರು. ಆದರೆ ಇದುವರೆಗೂ ಟೆಸ್ಟ್ ಮಾಡಿಸಿಕೊಂಡಿಲ್ಲ, ಕ್ವಾರಂಟೈನ್‌ಗೆ ಒಳಗಾಗಿಲ್ಲ. ಸಚಿವರಿಗೊಂದು ನ್ಯಾಯ, ಜನಸಾಮಾನ್ಯರಿಗೆ ಒಂದು ನ್ಯಾಯವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದರು.
ಡಿಕೆಶಿ ಮಾತಿಗೆ ಸುವರ್ಣ ನ್ಯೂಸ್‌ಗೆ ಸ್ವತಃ ವೈದ್ಯಕೀಯ ಸಚಿವ ಡಾ.ಕೆ ಸುಧಾಕರ್ ಇಂದು ಪ್ರತಿಕ್ರಿಯೆ ನೀಡಿದ್ದು, ಡಿ.ಕೆ. ಶಿವಕುಮಾರ್ ಅವರಿಗೆ ನನ್ನ ಮೇಲೆ ವಿಶೇಷ ಪ್ರೀತಿ-ಅಭಿಮಾನವಿದೆ. ನನ್ನ ಆರೋಗ್ಯದ ಬಗ್ಗೆ ಕಾಳಜಿ ವಹಿಸಿದ್ದಕ್ಕೆ ನಾನು ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಸುಧಾಕರ್ ತಿಳಿಸಿದ್ದಾರೆ.
ಕ್ವಾರಂಟೈನ್‌ನಲ್ಲಿರುವ ಸಚಿವರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಖಡಕ್ ಸೂಚನೆ
ನನಗೆ ವಿಶ್ರಾಂತಿ ಪಡೆಯಲು ಹೇಳಿದ್ದಾರೆ. ಅವರ ಸಲಹೆಯಂತೆ ನಾನು ಮೇ.05ನೇ ತಾರೀಖಿನವರೆಗೂ ಕ್ವಾರಂಟೈನ್‌ನಲ್ಲೇ ಇರುತ್ತೇನೆ. ಇನ್ನು ಸಚಿವ ಸಂಪುಟ ಸಭೆಗೂ ಹೋಗುತ್ತಿಲ್ಲ ಎಂದು ಹೇಳಿದರು. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.