ಕೊರೋನಾ ಹೊಸ ತಳಿ: ಕ್ವಾರಂಟೈನ್ 14 ದಿನ ಅಲ್ಲ, 28 ದಿನ?
ರಾತ್ರಿ 10 ಗಂಟೆ ಬೆಳಿಗ್ಗೆ 6 ಗಂಟೆಯವರೆಗೆ ನೈಟ್ ಕರ್ಫ್ಯೂ| ವರ್ಷಾಚರಣೆಗೆ ಬ್ರೇಕ್| ಸಾರ್ವಜನಿಕರ ಹಿತದೃಷ್ಟಿಯಿಂದ ಈ ನಿರ್ಧಾರ|
ಬೆಂಗಳೂರು(ಡಿ.23): ಇಂದು ರಾತ್ರಿ 10 ಗಂಟೆ ಬೆಳಿಗ್ಗೆ 6 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಸಚಿವ ಆರ್. ಸುಧಾಕರ್ ಅವರು ತಿಳಿಸಿದ್ದಾರೆ. ಜನೆವರಿ 2 ರ ವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ.
'ಎಲ್ಲಾ ವಿಮಾನಗಳನ್ನ ನಿಷೇಧಿಸಿ, ವಿದೇಶದಿಂದ ಬಂದವರಿಗೆ ಕ್ವಾರಂಟೈನ್ ಕಡ್ಡಾಯ ಮಾಡಿ'
ಈ ಮೂಲಕ ವರ್ಷಾಚರಣೆಗೆ ಬ್ರೇಕ್ ಬಿದ್ದಿದೆ. ಎಲ್ಲ ರೀತಿಯ ಚಟುವಟಿಕೆಗಳನ್ನ ರಾತ್ರಿ 10 ಗಂಟೆಯ ಒಳಗೆ ಮುಗಿಸಿಕೊಂಡು ಮನೆಗಳಿಗೆ ತೆರಳಬೇಕು. ಸಾರ್ವಜನಿಕರ ಹಿತದೃಷ್ಟಿಯಿಂದ ಈ ನಿರ್ಧಾರಗಳನ್ನ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.