ಸಚಿವ ಜಮೀರ್ ಅಹಮದ್ ಖಾನ್ ಲೋಕಾಯುಕ್ತ ವಿಚಾರಣೆ: ಒಳಗೆ ಏನು ನಡೆಯಿತು?
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಲೋಕಾಯುಕ್ತ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಮೂರು ಬಾರಿ ನೋಟಿಸ್‌ಗೆ ಉತ್ತರಿಸದ ಹಿನ್ನೆಲೆಯಲ್ಲಿ ಸಮನ್ಸ್ ಜಾರಿ ಮಾಡಲಾಗಿತ್ತು. ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾಗೊಂಡ ನಂತರ ಈ ವಿಚಾರಣೆ ನಡೆದಿದೆ.
ಬೆಂಗಳೂರು (ಡಿ.04): ಸಚಿವ ಜಮೀರ್ ಅಹ್ಮದ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಜಮೀರ್ ಅವರಿಗೆ ಖುದ್ದು ಹಾಜರಾಗುವಂತೆ ಸಮನ್ಸ್ ನೀಡಿದ್ದರು. ಈ ಹಿನ್ನೆಲೆಯಲ್ಲಿ ಜಮೀರ್ ಖುದ್ದು ವಿಚಾರಣೆಗೆ ಹಾಜರಾಗಿದ್ದರು. ಈ ವೇಳೆ ಡಿವೈಎಸ್ಪಿ ಸತೀಶ್ ಅವರಿಂದ ಸಚಿವ ಜಮೀರ್ ಅವರನ್ನು ವಿಚಾರಣೆ ಮಾಡಲಾಗಿದೆ. ಮೂರು ಬಾರಿ ನೋಟಿಸ್ ಗೆ ಉತ್ತರ ನೀಡದ ಜಮೀರ್ ಗೆ ಸಮನ್ಸ್ ನೀಡಲಾಗಿತ್ತು. ದಾಖಲೆ ಸಮೇತ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿತ್ತು. ಎಸಿಬಿಯಲ್ಲಿ ದಾಖಲಾಗಿದ್ದ ಪ್ರಕರಣ ಇದೀಗ ಲೋಕಾಯುಕ್ತದಲ್ಲಿ ತನಿಖೆ ಮಾಡಲಾಗುತ್ತಿದೆ. ಈ ಪ್ರಕರಣ ದಾಖಲಾದಾಗ ಜಮೀರ್ ಅಹ್ಮದ್ ಮನೆ ಮೇಲೆ ದಾಳಿ ನಡೆಸಿದ್ದ ಎಸಿಬಿ, ಜಮೀರ್ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ಮಾಡಿತ್ತು.
ಈ ಘಟನೆಯ ನಂತರ ಜಮೀರ್ ಆಹಮದ್ ಖಾನ್ ಅವರು, ಈ ಪ್ರಕರಣ ರದ್ದು ಕೋರಿ ಹೈಕೋರ್ಟ್, ಸುಪ್ರೀಂ ಕೋರ್ಟ್ ಗೆ ಹೋಗಿದ್ದರು. ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ನಲ್ಲಿ ಜಮೀರ್ ಅರ್ಜಿ ವಜಾಗೊಳಿಸಿತ್ತು. ಜೊತೆಗೆ, ಸುಪ್ರೀಂ ಕೋರ್ಟ್‌ನಿಂದ ತನಿಖೆಗೆ ಗ್ರೀನ್ ಸಿಗ್ನಲ್ ನೀಡಲಾಗಿತ್ತು. ಸುಪ್ರೀಂ ಕೋರ್ಟ್ ಆದೇಶದ ಬಳಿಕ ವಿಚಾರಣೆಗೆ ಜಮೀರ್ ವಿಚಾರಣೆಗೆ ಹಾಜರಾಗಿರಲಿಲ್ಲ. ಸದ್ಯ ಲೋಕಾ ಕಚೇರಿಯಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಗೆ ವಿಚಾರಣೆ ಮಾಡಲಾಗಿದೆ. ಆದರೆ, ಲೋಕಾಯುಕ್ತರ ವಿಚಾರಣೆಗೆ ಒಳಗೆ ಏನೆಲ್ಲಾ ನಡೆದಿದೆ ಎಂಬ ಡಿಟೇಲ್ಸ್ ಇಲ್ಲಿದೆ ನೋಡಿ..