Asianet Suvarna News Asianet Suvarna News

SSLC ಪರೀಕ್ಷೆ: ಮಕ್ಕಳಿಗೆ ಕಿವಿಮಾತು ಹೇಳಿದ ಸಚಿವ ಸುರೇಶ್ ಕುಮಾರ್

ರಾಜ್ಯದಾದ್ಯಂತ ಮಕ್ಕಳು ಅತ್ಯಂತ ಸುರಕ್ಷಿತ ರೀತಿಯಲ್ಲಿ ಪರೀಕ್ಷೆ ಬರೆಯಲು ರಾಜ್ಯ ಸರ್ಕಾರ ಅನುವು ಮಾಡಿಕೊಟ್ಟಿದೆ. ದೈರ್ಯದಿಂದ ಪರೀಕ್ಷೆ ಬರೆಯಿರಿ. ಚಿಂತೆಯನ್ನು ಬಿಟ್ಟು, ಯಾವುದೇ ಆತಂಕವಿಲ್ಲದೇ ಪರೀಕ್ಷೆ ಬರೆಯಿರಿ ಎಂದು ವಿದ್ಯಾರ್ಥಿಗಳಿಗೆ ಸುರೇಶ್ ಕುಮಾರ್ ಕಿವಿಮಾತು ಹೇಳಿದ್ದಾರೆ.
 
ಬೆಂಗಳೂರು(ಜೂ.25): ಕೊರೋನಾ ಭೀತಿಯ ನಡುವೆಯೇ ರಾಜ್ಯಾದ್ಯಂತ ಇಂದಿನಿಂದ(ಜೂ.25) SSLC ಪರೀಕ್ಷೆ ಆರಂಭವಾಗಿದೆ. ಎಂಟೂವರೆ ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸುತ್ತಿದ್ದು, ಜುಲೈ 04ರವೆರೆಗೆ ಪರೀಕ್ಷೆಗಳು ಜರುಗಲಿವೆ. ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಮಕ್ಕಳಿಗೆ ದೈರ್ಯ ತುಂಬುವ ಕೆಲಸವನ್ನು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಡಿದ್ದಾರೆ.

ರಾಜ್ಯದಾದ್ಯಂತ ಮಕ್ಕಳು ಅತ್ಯಂತ ಸುರಕ್ಷಿತ ರೀತಿಯಲ್ಲಿ ಪರೀಕ್ಷೆ ಬರೆಯಲು ರಾಜ್ಯ ಸರ್ಕಾರ ಅನುವು ಮಾಡಿಕೊಟ್ಟಿದೆ. ದೈರ್ಯದಿಂದ ಪರೀಕ್ಷೆ ಬರೆಯಿರಿ. ಚಿಂತೆಯನ್ನು ಬಿಟ್ಟು, ಯಾವುದೇ ಆತಂಕವಿಲ್ಲದೇ ಪರೀಕ್ಷೆ ಬರೆಯಿರಿ ಎಂದು ವಿದ್ಯಾರ್ಥಿಗಳಿಗೆ ಸುರೇಶ್ ಕುಮಾರ್ ಕಿವಿಮಾತು ಹೇಳಿದ್ದಾರೆ.

SSLC ಪರೀಕ್ಷೆ: ಸಾಮಾಜಿಕ ಅಂತರಕ್ಕೆ ಡೋಂಟ್‌ ಕೇರ್‌ ಎಂದ ವಿದ್ಯಾರ್ಥಿಗಳು..!

ಪರೀಕ್ಷೆ ನಡೆಯುತ್ತೋ, ಇಲ್ಲವೋ ಎನ್ನುವ ಗೊಂದಲಕ್ಕೆ ತೆರೆ ಎಳೆಯಲಾಗಿದೆ. ದಯವಿಟ್ಟು ಪರೀಕ್ಷಾ ಕೇಂದ್ರದ ಬಳಿ ಜಮಾಯಿಸಬೇಡಿ, ನಮ್ಮ ಜೊತೆ ಸಹಕರಿಸಿ ಎಂದು ಪೋಷಕರಿಗೆ ಸುರೇಶ್ ಕುಮಾರ್ ಮನವಿ ಮಾಡಿಕೊಂಡಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.