ಸಂತೋಷ್‌ ಲೀಡರ್‌ಗಳ ಜೊತೆ ಇರುವ ಫೋಟೋಗಳಿವೆ, ತನಿಖೆಯಾಗಲಿ: ಲಕ್ಷ್ಮೀ ಹೆಬ್ಬಾಳ್ಕರ್

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬಾಂಬ್ ಸಿಡಿಸಿದ್ದಾರೆ. 'ಸಂತೋಷ್ ಕೆಲವು ಲೀಡರ್‌ಗಳ ಜೊತೆ ಇರುವ ಫೋಟೋಗಳಿವೆ. ಸಂತೋಷ್ ಮನೆ ಬರೆಸಿಕೊಂಡ GPA ನನ್ನ ಬಳಿಯಿದೆ. ಈ ಬಗ್ಗೆ ಸಮಗ್ರ ತನಿಖೆ ಮಾಡಲಿ' ಎಂದಿದ್ದಾರೆ.  
 

Share this Video
  • FB
  • Linkdin
  • Whatsapp

ಬೆಂಗಳೂರು (ಏ. 13): ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬಾಂಬ್ ಸಿಡಿಸಿದ್ದಾರೆ. 'ಸಂತೋಷ್ ಕೆಲವು ಲೀಡರ್‌ಗಳ ಜೊತೆ ಇರುವ ಫೋಟೋಗಳಿವೆ. ಸಂತೋಷ್ ಮನೆ ಬರೆಸಿಕೊಂಡ GPA ನನ್ನ ಬಳಿಯಿದೆ. ಈ ಬಗ್ಗೆ ಸಮಗ್ರ ತನಿಖೆ ಮಾಡಲಿ' ಎಂದಿದ್ದಾರೆ.

ಸಂತೋಷ್ ಆತ್ಮಹತ್ಯೆ ಪ್ರಕರಣ: ಸಚಿವ ಈಶ್ವರಪ್ಪ ವಿರುದ್ಧ FIR ದಾಖಲು

ರಸ್ತೆ ಕಾಮಗಾರಿ ಹಣ ಬಿಡುಗಡೆ ಆಗಿಲ್ಲದ್ದಕ್ಕೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಹೆಸರನ್ನು ಬರೆದಿಟ್ಟು ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಎಂಬವರು ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದು, ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ. 

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈಶ್ವರಪ್ಪ ಪರ ನಿಂತಿದ್ದು, ಸಂತೋಷ್‌ ಆತ್ಮಹತ್ಯೆ ಏಕೆ ಮಾಡಿಕೊಂಡರು ಎಂಬುದು ತನಿಖೆಯಿಂದ ಪತ್ತೆಯಾಗಬೇಕಿದೆ. ತಮ್ಮ ವಿರುದ್ಧದ ಆರೋಪಗಳಿಗೆ ಈಗಾಗಲೇ ಈಶ್ವರಪ್ಪ ಅವರು ನ್ಯಾಯಾಲಯದಲ್ಲಿ ಮಾನನಷ್ಟಮೊಕದ್ದಮೆ ಹಾಕಿದ್ದಾರೆ. 

Related Video