ಮಂಗಳೂರಿನಲ್ಲಿ ನಡೆದ 3 ಕೊಲೆಗಳ ತನಿಖೆ ನಿಷ್ಪಕ್ಷಪಾತವಾಗಿ ನಡೆಯಬೇಕು: ಯು ಟಿ ಖಾದರ್
ಮಂಗಳೂರಿನಲ್ಲಿ ನಡೆದ 3 ಕೊಲೆಗಳು ಖಂಡನೀಯ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಸರ್ಕಾರ ಪಕ್ಷಪಾತ ಮಾಡದೇ ಸಮರ್ಪಕವಾಗಿ ತನಿಖೆ ಮಾಡಬೇಕು. ಜನರಲ್ಲಿ ವಿಶ್ವಾಸ ಮೂಡಿಸಬೇಕು' ಎಂದು ಶಾಸಕ ಯು ಟಿ ಖಾದರ್ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಮಂಗಳೂರು (ಜು. 29): ಮಂಗಳೂರಿನಲ್ಲಿ ನಡೆದ 3 ಕೊಲೆಗಳು ಖಂಡನೀಯ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಸರ್ಕಾರ ಪಕ್ಷಪಾತ ಮಾಡದೇ ಸಮರ್ಪಕವಾಗಿ ತನಿಖೆ ಮಾಡಬೇಕು. ಜನರಲ್ಲಿ ವಿಶ್ವಾಸ ಮೂಡಿಸಬೇಕು' ಎಂದು ಶಾಸಕ ಯು ಟಿ ಖಾದರ್ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ರಾಜ್ಯದಲ್ಲಿ ಶಾಂತಿ- ಸುವ್ಯಸ್ಥೆ ಸಂಪೂರ್ಣ ಕುಸಿದಿದೆ, ಗೃಹ ಸಚಿವರನ್ನು ಕಿತ್ತು ಹಾಕ್ಬೇಕು: ಸಿದ್ದರಾಮಯ್ಯ
ಸುಳ್ಯದ ಬೆಳ್ಳಾರೆಯಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯ ಉದ್ವಿಗ್ನತೆ ಸಹಜ ಸ್ಥಿತಿಗೆ ಮರಳುವ ಮೊದಲೇ ಜಿಲ್ಲೆಯ ಮತ್ತೊಂದು ಕಡೆ ಯುವಕನ ಹತ್ಯೆ ನಡೆದಿದೆ. ಸುರತ್ಕಲ್‌ನಲ್ಲಿ ಯುವಕನ ಮೇಲೆ ತಲವಾರು ದಾಳಿ ನಡೆಸಿ ದುಷ್ಕರ್ಮಿಗಳು ಪರಾರಿಯಾಗಿದ್ದು, ಗಂಭೀರಾವಸ್ಥೆಯಲ್ಲಿದ್ದ ಯುವಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಮುಖ್ಯಮಂತ್ರಿ ಇದ್ದಾಗಲೇ ಈ ಪ್ರಕರಣ ನಡೆದಿರುವುದು ಜಿಲ್ಲೆಯ ಕಾನೂನು ಸುವ್ಯವಸ್ಥೆಯನ್ನು ಮತ್ತೊಮ್ಮೆ ಪ್ರಶ್ನಿಸುವಂತೆ ಮಾಡಿದೆ.