Asianet Suvarna News Asianet Suvarna News

ಹೆಚ್ಚೆಚ್ಚು ಕೊರೋನಾ ಟೆಸ್ಟ್ ಮಾಡಬೇಕು: ಡಾ. ಸಿ.ಎನ್. ಮಂಜುನಾಥ್

ನಗರದಲ್ಲಿ  ILI ಮತ್ತು SARI ಪ್ರಕರಣಗಳು ಹೆಚ್ಚುತ್ತಿರುವುದು ಸಾಕಷ್ಟು ಆತಂಕಕಾರಿಯಾದ ವಿಚಾರವಾಗಿದೆ. ಹೀಗಾಗಿ ರಾಂಡಮ್ ಟೆಸ್ಟ್ ಹೆಚ್ಚೆಚ್ಚು ಮಾಡಬೇಕಿದೆ. ಅಂದರೆ ಸೋಂಕಿನ ಲಕ್ಷಣ ಇರಲಿ, ಇಲ್ಲದೇ ಇರಲಿ ಎಲ್ಲೆಲ್ಲಿ ಸೋಂಕು ಹಬ್ಬುವ ಸಾಧ್ಯತೆಯಿರತ್ತೆ ಅಲ್ಲೆಲ್ಲಾ ಹೆಚ್ಚಾಗಿ ಪರೀಕ್ಷೆ ಮಾಡಬೇಕು ಎಂದು ಕೊರೋನಾ ಟಾಸ್ಕ್ ಫೋರ್ಸ್ ಸದಸ್ಯ ಡಾ. ಸಿ.ಎನ್. ಮಂಜುನಾಥ್ ಹೇಳಿದ್ದಾರೆ.

ಬೆಂಗಳೂರು(ಜೂ.22): ಇಡೀ ದೇಶಾದ್ಯಂತ ಕೊರೋನಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಲೇ ಇದೆ. ಇದಕ್ಕೆ ಬೆಂಗಳೂರು ಕೂಡಾ ಹೊರತಾಗಿಲ್ಲ. ಕಳೆದ 10 ದಿನಗಳಲ್ಲಿ ಬೆಂಗಳೂರಿನಲ್ಲಿ ಕೋವಿಡ್ 19 ಪ್ರಕರಣಗಳು ತೀವ್ರಗತಿಯಲ್ಲಿ ಹೆಚ್ಚಾಗುತ್ತಿದೆ.  

ನಗರದಲ್ಲಿ  ILI ಮತ್ತು SARI ಪ್ರಕರಣಗಳು ಹೆಚ್ಚುತ್ತಿರುವುದು ಸಾಕಷ್ಟು ಆತಂಕಕಾರಿಯಾದ ವಿಚಾರವಾಗಿದೆ. ಹೀಗಾಗಿ ರಾಂಡಮ್ ಟೆಸ್ಟ್ ಹೆಚ್ಚೆಚ್ಚು ಮಾಡಬೇಕಿದೆ. ಅಂದರೆ ಸೋಂಕಿನ ಲಕ್ಷಣ ಇರಲಿ, ಇಲ್ಲದೇ ಇರಲಿ ಎಲ್ಲೆಲ್ಲಿ ಸೋಂಕು ಹಬ್ಬುವ ಸಾಧ್ಯತೆಯಿರತ್ತೆ ಅಲ್ಲೆಲ್ಲಾ ಹೆಚ್ಚಾಗಿ ಪರೀಕ್ಷೆ ಮಾಡಬೇಕು ಎಂದು ಕೊರೋನಾ ಟಾಸ್ಕ್ ಫೋರ್ಸ್ ಸದಸ್ಯ ಡಾ. ಸಿ.ಎನ್. ಮಂಜುನಾಥ್ ಹೇಳಿದ್ದಾರೆ.

ಕೊರೋನಾ ಭೀತಿ: 9 ದಿನ ಕನಕಪುರ ಲಾಕ್‌ಡೌನ್..!

ಸುವರ್ಣ ನ್ಯೂಸ್ ಜತೆ ಮಾತನಾಡಿದ ಸಿ.ಎನ್. ಮಂಜುನಾಥ್, ಯಾರೆಲ್ಲಾ ಸಾರ್ವಜನಿಕರೊಂದಿಗೆ ಸಂಪರ್ಕದಲ್ಲಿರುತ್ತಾರೋ ಅಂತವರನ್ನು ಆದ್ಯತೆಯ ಮೇರೆಗೆ ಕೊರೋನಾ ಟೆಸ್ಟ್‌ಗೆ ಒಳಪಡಿಸಬೇಕು ಎಂದು ಹೇಳಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 
Video Top Stories