Asianet Suvarna News Asianet Suvarna News

Morning Express: ಆಸಾನಿ ಮತ್ತಷ್ಟು ಚುರುಕು, ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ

ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ‘ಆಸಾನಿ’ ಚಂಡಮಾರುತದ ಪ್ರಭಾವದಿಂದಾಗಿ ಕಳೆದ 4 ದಿನಗಳಿಂದ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ಕರಾವಳಿ ಪ್ರದೇಶ, ದಕ್ಷಿಣ ಒಳನಾಡಿನಲ್ಲಿ ಮಳೆ ಬರುವ ಸಾಧ್ಯತೆಯಿದ್ದು,  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ ಮಾಹಿತಿಯನ್ನು ನೀಡಿದೆ.

ಬೆಂಗಳೂರು (ಮೇ.12): ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ‘ಆಸಾನಿ’ (Asani) ಚಂಡಮಾರುತದ ಪ್ರಭಾವದಿಂದಾಗಿ ಕಳೆದ 4 ದಿನಗಳಿಂದ ರಾಜ್ಯದಲ್ಲಿ (Karnataka) ಭಾರೀ ಮಳೆಯಾಗುತ್ತಿದ್ದು (Rain), ಕರಾವಳಿ ಪ್ರದೇಶ, ದಕ್ಷಿಣ ಒಳನಾಡಿನಲ್ಲಿ ಮಳೆ ಬರುವ ಸಾಧ್ಯತೆಯಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ ಮಾಹಿತಿಯನ್ನು ನೀಡಿದೆ. ರಾಜ್ಯದ ಹಲವೆಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮೇ 14ರವರೆಗೂ ರಾಜ್ಯದ ಹಲವು ಭಾಗದಲ್ಲಿ ಮಳೆ ಸುರಿಯುವ ಸಾಧ್ಯತೆ ಹೆಚ್ಚಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರ ತಿಳಿಸಿದೆ. 

'ಅಸಾನಿ' ಅಬ್ಬರ, ಆಂಧ್ರ ಕರಾವಳಿಯಲ್ಲಿ ಪತ್ತೆಯಾಯ್ತು 'ಚಿನ್ನದ' ರಥ, ಹಗ್ಗ ಕಟ್ಟಿ ಎಳೆತಂದ ಗ್ರಾಮಸ್ಥರು!

ರಾಜ್ಯದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಉಷ್ಣತೆ ವಾಡಿಕೆಗಿಂತ ಕಡಿಮೆ ಆಗಿದೆ. ಮುಂದಿನ ಎರಡ್ಮೂರು ದಿನ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉಷ್ಣತೆ ವಾಡಿಕೆಗಿಂತ ಕಡಿಮೆ ಇರುವ ಸಾಧ್ಯತೆ ಹೆಚ್ಚಿದೆ. ಮಳೆ, ಮೋಡ ಕವಿದ ವಾತಾವರಣ ಇರುವುದರಿಂದ ತೇವಾಂಶ ಅಧಿಕವಾಗಿರಲಿದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

Video Top Stories