ಸಿಎಂ ಸಿದ್ದರಾಮಯ್ಯಗೆ ಬೆಂಬಲ ಸೂಚಿಸುತ್ತಾ ಕಿವಿ ಹಿಂಡಿದ್ರಾ ಖರ್ಗೆ?

ಸಿದ್ದರಾಮಯ್ಯ ವಿರುದ್ದ ಎಫ್ಐಆರ್ ಕುರಿತು ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ, ಸಿದ್ದರಾಮಯ್ಯ ವಿರುದ್ದ ಕಿಡಿ ಕಾರಿದ ಹೆಚ್‌ಡಿ ಕುಮಾರಸ್ವಾಮಿ,ಮುಡಾ ಸಂಕಷ್ಟದ ನಡುವೆ ಮೈಸೂರಿನಲ್ಲಿ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

Share this Video
  • FB
  • Linkdin
  • Whatsapp

ಕೊನೆಗೂ ಸಿಎಂ ಸಿದ್ದರಾಮಯ್ಯ ವಿರುದ್ದ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸಿದ್ದರಾಮಯ್ಯ ಆರೋಪಿ ನಂಬರ್ 1 ಆಗಿದ್ದರೆ, ಅವರ ಪತ್ನಿ ಆರೋಪಿ ನಂ.2 ಆಗಿದ್ದಾರೆ. ಮುಡಾ ಪ್ರಕರಣ ಸಂಬಂಧ ಸಿದ್ದರಾಮಯ್ಯ ವಿರುದ್ದ ದೂರು ದಾಖಲಾಗಿದೆ. ಇತ್ತ ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯಗೆ ಬೆಂಬಲ ಸೂಚಿಸಿದ್ದಾರೆ. ಈ ಪೈಕಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಬೆಂಬಲ ಸೂಚಿಸುವ ವೇಳೆ ಆಡಿದ ಸೂಚ್ಯ ಮಾತು ಇದೀಗ ಚರ್ಚೆಗೆ ಗ್ರಾಸವಾಗಿದೆ. ಮುಡಾ ಸಂಕಷ್ಟದಲ್ಲಿ ಸಿಲುಕಿರುವ ಸಿದ್ದರಾಮಯ್ಯ ಮೂರು ದಿನಗಳ ಮೈಸೂರು ಪ್ರವಾಸ ಕೈಗೊಂಡಿದ್ದಾರೆ. ಇದೇ ವೇಳೆ ಮೈಸೂರಿನಲ್ಲಿ ಶಕ್ತಿ ಪ್ರದರ್ಶನ ನಡೆಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video