ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಮುಂದಿರುವ ದಾರಿ ಏನು? ದಾಖಲಾಗುತ್ತಾ FIR?
ಮುಡಾ ಪ್ರಕರಣದಲ್ಲಿ ಹೈಕೋರ್ಟ್‌ನಿಂದ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಗ್ರೀನ್ ಸಿಗ್ನಲ್, ನಾಳೆ ದಾಖಲಾಗುತ್ತಾ FIR, ಹೈಕೋರ್ಟ್ ಆದೇಶದಲ್ಲಿ ಉಲ್ಲೇಖಿಸಿದ ಅಂಶಗಳೇನು? ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
ಮುಡಾ ಪ್ರಕರಣ ಸಂಬಂಧ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ನೀಡಿದ ತನಿಖೆ ಆದೇಶ ಸರಿಯಾಗಿದೆ ಎಂದು ಇಂದು ಹೈಕೋರ್ಟ್ ತೀರ್ಪು ನೀಡಿದೆ. ಇದೀಗ ಸಿದ್ದರಾಮಯ್ಯ ಮುಂದಿರುವ ಕಾನೂನು ಹೋರಾಟದ ದಾರಿ ಚರ್ಚಿಸಿದ್ದಾರೆ. ಜನಸಾಮಾನ್ಯರಾಗಿದ್ದರೆ ಈ ರೀತಿ ಲಾಭ ಪಡೆಯಲು ಸಾಧ್ಯವಾಗುತ್ತಿರಲಿಲ್ಲ ಎಂದು ಹೈಕೋರ್ಟ್ ಮುಡಾ ಪ್ರಕರಣದ ತೀರ್ಪಿನಲ್ಲಿ ಹೇಳಿದೆ. ಹೀಗಾಗಿ ತನಿಖೆಯ ಅಗತ್ಯವಿದೆ ಎಂದಿದೆ. ತೀರ್ಪಿನ ಬಳಿಕ ಸಿಎಂ ಸಿದ್ದರಾಮಯ್ಯ, ಇದು ಬಿಜೆಪಿ-ಜೆಡಿಎಸ್ ಸೇಡಿನ ರಾಜಕಾರಣ ಎಂದು ಆರೋಪಿಸಿದ್ದಾರೆ.ಮುಡಾ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ಮುಖ್ಯಮಂತ್ರಿ ವಿರುದ್ಧ ತನಿಖೆಗೆ ಅಸ್ತು ಎಂದಿದೆ. ಇದರಿಂದ ನಾಳೆ ಸಿದ್ದರಾಮಯ್ಯ ವಿರುದ್ದ ಎಫ್ಐಆರ್ ದಾಖಲಾಗುತ್ತಾ?