ಚಿತ್ರದುರ್ಗ: ಕಾಂಗ್ರೆಸ್‌ ಟಿಕೆಟ್‌ಗಾಗಿ ಮುರುಘಾ ಮಠದ ಮಾಜಿ ಆಡಳಿತಾಧಿಕಾರಿ ಬಸವರಾಜನ್ ಅರ್ಜಿ!

ಕೆಪಿಸಿಸಿ ಕಚೇರಿಗೆ ಎಸ್‌.ಕೆ. ಬಸವರಾಜನ್‌ ಕಾಂಗ್ರೆಸ್‌ ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಇವರು ಮಾಜಿ ಶಾಸಕರೂ ಆಗಿದ್ದು ಹಾಗೂ ಮುರುಘಾ ಮಠದ ಮಾಜಿ ಆಡಳಿತಾಧಿಕಾರಿಯೂ ಆಗಿದ್ದಾರೆ.

Share this Video
  • FB
  • Linkdin
  • Whatsapp

ಚಿತ್ರದುರ್ಗ ಕಾಂಗ್ರೆಸ್‌ ಟಿಕೆಟ್‌ಗೆ ಬಸವರಾಜನ್‌ ಅರ್ಜಿ ಹಾಕಿದ್ದಾರೆ. ಎಸ್‌.ಕೆ. ಬಸವರಾಜನ್‌ ಮುರುಘಾ ಕೇಸ್‌ನಲ್ಲಿ ಸದ್ಯ ಜೈಲಿನಲ್ಲಿದಲ್ಲಿದ್ದಾರೆ. ಕೆಪಿಸಿಸಿ ಕಚೇರಿಗೆ ಎಸ್‌.ಕೆ. ಬಸವರಾಜನ್‌ ಕಾಂಗ್ರೆಸ್‌ ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಇವರು ಮಾಜಿ ಶಾಸಕರೂ ಆಗಿದ್ದು ಹಾಗೂ ಮುರುಘಾ ಮಠದ ಮಾಜಿ ಆಡಳಿತಾಧಿಕಾರಿಯೂ ಆಗಿದ್ದಾರೆ. 2008 ರಲ್ಲಿ ಇವರು ಜೆಡಿಎಸ್‌ನಿಂದ ಶಾಸಕರಾಗಿದ್ದರು. ಆದರೆ, 2018ರಲ್ಲಿ ಇವರು ಚುನಾವಣೆಗೆ ಸ್ಪರ್ಧಿಸಿರಲಿಲ್ಲ. ಈಗ 2023ರ ರಾಜ್ಯ ವಿಧಾನಸಭೆ ಚುನಾವಣೆಗೆ ಇವರು ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದಾರೆ. ಜೈಲಿನಲ್ಲಿದ್ದರೂ ತಮ್ಮ ಬೆಂಬಲಿಗರ ಮೂಲಕ ಇವರು ಅರ್ಜಿ ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ. 

Related Video