ಮೈಸೂರಿನ ಉದಯಗಿರಿ ಗಲಭೆ ಪೂರ್ವನಿಯೋಜಿತ ಕೃತ್ಯ?
ಮೈಸೂರಲ್ಲಿ ಡಿಜೆ ಹಳ್ಳಿ, ಕೆಜೆ ಹಳ್ಳಿ ಮಾದರಿಯಲ್ಲಿ ಮತ್ತೊಂದು ದಂಗೆ, ಗಲಭೆ ಪೂರ್ವನಿಯೋಜಿತ ಕೃತ್ಯವೇ? ಭದ್ರಾವತಿ ಶಾಸಕ ಸಂಗಮೇಶ್ ಪುತ್ರನ ಅಂಧಾದರ್ಬಾರ್ ಬಯಲು, ರಾಜ್ಯ ಬಿಜೆಪಿ ಬಣ ಬಡಿದಾಟ.. ದೆಹಲಿಯಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆ ಸೇರಿ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
ಮೈಸೂರು(ಫೆ.11) ಡಿಜೆ ಹಳ್ಳಿ, ಕೆಜೆ ಹಳ್ಳಿ ಮಾದರಿಯಲ್ಲಿ ಮತ್ತೊಂದು ದಂಗೆ ಮೈಸೂರಿನಲ್ಲಿ ನಡೆದಿದೆ. ದೆಹಲಿಯಲ್ಲಿ ಬಿಜೆಪಿ ಗೆದ್ದಿದ್ದಕ್ಕೆ ಅರೇಬಿಕ್ನಲ್ಲಿ ಆಕ್ಷೇಪಾರ್ಹ ಪೋಸ್ಟ್ ಹಾಕಿದ ಕಾರಣಕ್ಕೆ ಗಲಭೆ ಆರಂಭಗೊಂಡಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದರೂ ಸಮುದಾಯ ಸದಸ್ಯರು ಪೊಲೀಸ್ ಠಾಣೆ ಮುಂದೆ ಸೇರಿ ಭಾರಿ ವಾಗ್ವಾದ ನಡೆಸಿದ್ದಾರೆ. ಆರೋಪಿಯನ್ನು ತಮಗೆ ಒಪ್ಪಿಸುವಂತೆ ಬೇಡಿಕೆ ಇಟ್ಟಿದ್ದಾರೆ. ಆದರೆ ಪ್ರತಿಭಟನಾಕಾರರ ಬೇಡಿಕೆ ನಿರಾಕರಿಸಿದ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಇದು ಹಿಂಸಾಚಾರಕ್ಕೆ ತಿರುಗಿದೆ. ಬಾರಿ ಗಲಭೆನಡೆದಿದೆ. ಇದು ಪೂರ್ವನಿಯೋಜಿತ ಕೃತ್ಯ ಅನ್ನೋ ಅನುಮಾನಗಳು ಬಲವಾಗತೊಡಗಿದೆ.