ರಾಜ್ಯದ ಜನತೆಗೆ ಹಾಲಿನ ದರ ಏರಿಕೆ ಶಾಕ್? ಪ್ರತಿ ಲೀ.ಗೆ 5 ರೂ. ಹೆಚ್ಚಳ?
ಹೊಸ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಮತ್ತೆ ಹಾಲಿನ ದರ ಹೆಚ್ಚಿಸಲು ಬಮೂಲ್ ಪ್ರಸ್ತಾವನೆ ಸಲ್ಲಿಸಿದೆ. ಪ್ರತಿ ಲೀ.ಗೆ 5 ರೂ. ಹೆಚ್ಚಳ ಮಾಡಲು ಬಮೂಲ್ ಪಟ್ಟು ಹಿಡಿದಿದೆ. ಆರು ತಿಂಗಳ ಹಿಂದಷ್ಟೇ ಹಾಲಿನ ಉತ್ಪನ್ನಗಳ ದರ ಏರಿಕೆ ಆಗಿತ್ತು.
ಬೆಂಗಳೂರು (ಜೂ.08): ಹೊಸ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಮತ್ತೆ ಹಾಲಿನ ದರ ಹೆಚ್ಚಿಸಲು ಬಮೂಲ್ ಪ್ರಸ್ತಾವನೆ ಸಲ್ಲಿಸಿದೆ. ಪ್ರತಿ ಲೀ.ಗೆ 5 ರೂ. ಹೆಚ್ಚಳ ಮಾಡಲು ಬಮೂಲ್ ಪಟ್ಟು ಹಿಡಿದಿದೆ. ಆರು ತಿಂಗಳ ಹಿಂದಷ್ಟೇ ಹಾಲಿನ ಉತ್ಪನ್ನಗಳ ದರ ಏರಿಕೆ ಆಗಿತ್ತು. ಇದೀಗ ಮತ್ತೆ ಗ್ರಾಹಕರಿಗೆ ಮತ್ತೆ ಬೆಲೆ ಏರಿಕೆಯ ಬಿಸಿ ತಟ್ಟಲಿದೆಯಾ ಎಂಬುದನ್ನು ಕಾದು ನೋಡಬೇಕಾಗಿದೆ. ಹಾಲು ಒಕ್ಕೂಟಗಳು ನಷ್ಟದ ಕಾರಣ ಎರಡು ತಿಂಗಳಿಂದ ರೈತರಿಗೆ ನೀಡುತ್ತಿದ್ದ ಸಹಾಯಧನವನ್ನು ನಿಲ್ಲಿಸೋಕೆ ಮುಂದಾಗಿದ್ದವು. ಆದ್ರೆ ಇದಕ್ಕೆ ವಿರೋಧ ಮಾಡಿದ ಸಿಎಂ ಸಿದ್ದರಾಮಯ್ಯ ಪ್ರೋತ್ಸಾಹ ಧನ ಕಡಿತ ಮಾಡದಂತೆ ಸೂಚನೆ ನೀಡಿದ್ದರು.
ಹೀಗಾಗಿ ಕಡಿತಗೊಳಿಸಿದ ದರವನ್ನು ಮತ್ತೆ ರೈತರಿಗೆ ನೀಡಲು ಒಕ್ಕೂಟಗಳು ಮುಂದಾಗಿವೆ. ಆದರೆ ಸರ್ಕಾರದ ಮುಂದೆ ಈಗ ದರ ಏರಿಕೆಯ ಪ್ರಸ್ತಾವನೆ ಇಡಲು ತಯಾರಾಗಿದೆ. ನಂದಿನಿ ಹಾಲಿನ ದರ ಪರಿಷ್ಕರಿಸುವಂತೆ ಒಕ್ಕೂಟಗಳು ಪಟ್ಟು ಹಿಡಿದಿವೆ. ಲೀಟರ್ ಹಾಲಿನ ದರದ ಮೇಲೆ 5 ರೂಪಾಯಿ ಏರಿಕೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಬಮೂಲ್ ಅಧ್ಯಕ್ಷ ನರಸಿಂಹ ಮೂರ್ತಿ ತಿಳಿಸಿದ್ದಾರೆ. ಬಮೂಲ್ಗೆ ಮಾರ್ಚ್ ಮತ್ತು ಏಪ್ರಿಲ್ ತಿಂಗಳಲ್ಲಿ ಪೂರೈಕೆ ಆಗುವ ಹಾಲಿನ ಪ್ರಮಾಣ ಕಡಿಮೆ ಆಗಿತ್ತು. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.