Pak Pro Slogan: ಎಫ್‌ಎಸ್‌ಎಲ್‌ ವರದಿ ಬಿಚ್ಚಿಟ್ಟ ಪಾಕ್‌ ಪ್ರೇಮ! ಕ್ಲೀನ್ ಚಿಟ್‌ ಕೊಟ್ಟವರು ಈಗ ಏನಾಂತರೆ ?

ಎಫ್‌ಎಸ್‌ಎಲ್‌ ವರದಿಯಲ್ಲಿ ಪಾಕ್‌ ಪರ ಘೋಷಣೆ ಕೂಗಿರುವುದು ದೃಢಪಟ್ಟಿದ್ದು, ಮೂವರನ್ನು ಬಂಧಿಸಲಾಗಿದೆ.
 

Share this Video
  • FB
  • Linkdin
  • Whatsapp

ಪಾಕ್‌ ಪರ ಘೋಷಣೆ ಕೂಗಿರುವುದು ಎಫ್‌ಎಸ್ಎಲ್‌ ವರದಿಯಲ್ಲಿ(FSL report) ದೃಢಪಟ್ಟಿದೆ. ಇದರ ಬೆನ್ನಲ್ಲೇ ಮೂವರನ್ನು ಅರೆಸ್ಟ್‌ ಮಾಡಲಾಗಿದೆ. ಕಾಂಗ್ರೆಸ್‌ನ(Congress) ನಾಸೀರ್‌ ಹುಸೇನ್‌(Naseer Hussain) ಬೆಂಬಲಿಗರು ವಿಧಾನಸೌಧದಲ್ಲಿ ಪಾಕಿಸ್ತಾನ್‌ ಜಿಂದಾಬಾದ್‌(Pakistan Zindabad) ಎಂದು ಕೂಗಿದ್ದರು. ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಮೊಹಮ್ಮದ್‌ ಶಫಿ ನಾಶಿಪುಡಿ, ದೆಹಲಿ ಕಿಶನ್‌ಗಂಜ್‌ನ ಮೊಹಮ್ಮದ್‌ ಇಲ್ತಾಜ್‌ ಹಾಗೂ ಶಿವಾಜಿನಗರದ ಜಯಮಹಲ್‌ನ ಮುನಾವರ್ ಅಹ್ಮದ್ ಬಂಧಿತರಾಗಿದ್ದಾರೆ.ಆರೋಪಿಗಳು ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಎಫ್‌ಎಸ್‌ಎಲ್ ವರದಿಯಲ್ಲಿ ಸಾಬೀತಾಗಿದೆ. ಕಳೆದ ಫೆ.27ರಂದು ವಿಧಾನಸೌಧದಲ್ಲಿ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್‌ ಅಭ್ಯರ್ಥಿ ನಾಸೀರ್‌ ಹುಸೇನ್‌ ವಿಜಯೋತ್ಸವದ ವೇಳೆ ಅವರ ಬೆಂಬಲಿಗರು ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಿದ್ದರು.

ಇದನ್ನೂ ವೀಕ್ಷಿಸಿ: Rameshwaram Cafe Blast: ಟೋಪಿ..ಮಾಸ್ಕ್..ಗಡ್ಡ..ಯಾರಿವನು..? ಎಲ್ಲಿಗೆ ಬಂತು ಬಾಂಬ್ ಬ್ಲಾಸ್ಟ್ ತನಿಖೆ..? ಆರೋಪಿ ಎಲ್ಲಿ..?

Related Video