
ಬಳ್ಳಾರಿ ಬಾಣಂತಿಯರ ಸಾವು ಪ್ರಕರಣಕ್ಕೆ ಹೊಸ ಟ್ವಿಸ್ಟ್! ಸಾವಿಗೆ ಕಾರಣ ಗ್ಲುಕೋಸ್ ಅಲ್ಲ! ಮತ್ತೇನು?
ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರವು ಉನ್ನತ ಮಟ್ಟದ ತಜ್ಞರ ಸಮಿತಿಯನ್ನು ರಚಿಸಿದೆ. ಈ ಸಮಿತಿಯು ಐದು ದಿನಗಳಲ್ಲಿ ತನಿಖೆ ನಡೆಸಿ ವರದಿ ಸಲ್ಲಿಸುವ ನಿರೀಕ್ಷೆಯಿದೆ. ಔಷಧಿ ಖರೀದಿ, ಕೆಎಸ್‌ಎಂಎಸ್‌ಸಿಎಲ್ ಅಧಿಕಾರಿಗಳ ಪಾತ್ರ ಸೇರಿದಂತೆ ಹಲವು ಅಂಶಗಳ ಬಗ್ಗೆ ತನಿಖೆ ನಡೆಸಲಿದೆ.
ಬಳ್ಳಾರಿ (ಡಿ.09): ಬಳ್ಳಾರಿ ಬಾಣಂತಿಯರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದಿಂದ ಉನ್ನತ ತಜ್ಞರ ಸಮಿತಿ ರಚನೆ ಮಾಡಿ ಆದೇಶ ಹೊರಡಿಸಲಾಗಿದೆ. ಈ ಸಮಿತಿಯು ಐದು ದಿನಗಳಲ್ಲಿ ವರದಿ ಸಲ್ಲಿಕೆ ಮಾಡುವಂತೆ ಸೂಚಿಸಲಾಗಿದೆ. ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಕೆ. ನದೀಮ್ ಅಹ್ಮದ್ ಆದೇಶ ಹೊರಡಿಸಿದ್ದಾರೆ.
ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದ್ದಾರೆ. ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಎಂ.ಕನಗವಲ್ಲಿ, ಔಷಧಿ ನಿಯಂತ್ರಣ ಇಲಾಖೆಯ ಸಹಾಯಕ ನಿಯಂತ್ರಕ ವೆಂಕಟೇಶ, ವೈದ್ಯಕೀಯ ಕಾಲೇಜಿನ ಮೈಕ್ರೋಬಯೋಲಜಿಸ್ಟ್ ಡಾ. ಆಸೀಮಾ ಬಾನು, ರಾಜೀವ್ ಗಾಂಧಿ ವಿವಿಯ ಹಿರಿಯ ಫಾರ್ಮಾಕಾಲಜಿ ಪ್ರಾಧ್ಯಾಪಕ ತಂಡ ತನಿಖೆ ನಡೆಸಲಿದೆ.
ಈ ಅಂಶಗಳ ಮೇಲೆ ತನಿಖೆ:
ಟೆಂಡರ್ ಮೂಲಕ ಔಷಧಿಗಳ ಖರೀದಿ ಮತ್ತು ಲ್ಯಾಬ್ ಗಳಿಗೆ ಔಷಧಿ ಮಾದರಿ ನೀಡುವಲ್ಲಿ ನಿಯಮ ಉಲ್ಲಂಘನಯಾಗಿದೆಯಾ..?
ಘಟನೆಯಲ್ಲಿ ಕೆಎಸ್‌ಎಂಎಸ್‌ಸಿಎಲ್ ಅಧಿಕಾರಿಗಳ ಪಾತ್ರ ಮತ್ತು ಲೋಪ ಆಗಿದೆಯೇ?
ಅಧಿಕಾರಿಗಳ ಮೇಲೆ ಜವಾಬ್ದಾರಿ ನಿಗದಿ ಮಾಡುವ ಬಗ್ಗೆ ಎಲ್ಲಿ ಲೋಪವಾಗಿದೆ?
ಕೆಎಸ್‌ಎಂಎಸ್‌ಸಿಎಲ್ ನಲ್ಲಿ ಅಸ್ತಿತ್ವದಲ್ಲಿರುವ ಕಾರ್ಯ ವಿಧಾನಗಳು ಸೇರಿದಂತೆ ಇತ್ಯಾದಿ ಅಂಶಗಳ ಬಗ್ಗೆ ಪರಿಶೀಲಿಸಿ ವರದಿ ನೀಡುವಂತೆ ಆದೇಶಿಸಲಾಗಿದೆ.