ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಫೀಲ್ಡಿಗಿಳಿದ ಎನ್‌ಐಎ ತಂಡ
ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಎನ್‌ಐಎಗೆ ವಹಿಸಿದೆ. ಹೈದರಾಬಾದ್ ಹಾಗೂ ಬೆಂಗಳೂರು NIA ಅಧಿಕಾರಿಗಳು ಮಂಗಳೂರಿಗೆ ಆಗಮಿಸಿದ್ದಾರೆ.
ಬೆಂಗಳೂರು (ಜು. 31): ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಎನ್‌ಐಎಗೆ ವಹಿಸಿದೆ. ಹೈದರಾಬಾದ್ ಹಾಗೂ ಬೆಂಗಳೂರು NIA ಅಧಿಕಾರಿಗಳು ಮಂಗಳೂರಿಗೆ ಆಗಮಿಸಿದ್ದಾರೆ.
ಪ್ರವೀಣ್ ಹತ್ಯೆ ಕೇಸ್‌ನ ಎನ್‌ಐಗೆ ವಹಿಸಬೇಕೆಂದು ದೊಡ್ಡ ಮಟ್ಟದಲ್ಲಿ ಕೂಗು ಕೇಳಿ ಬಂದಿತ್ತು. ಆಗ ಮಾತ್ರ ಸತ್ಯಾಂಶ ಹೊರಬಂದು ತಪ್ಪಿತಸ್ಥರಿಗೆ ಶಿಕ್ಷೆಯಾಗುತ್ತದೆ. ಹಾಗಾಗಿ ಎನ್‌ಐಗೆ ವಹಿಸಿ ಎಂದು ಸರ್ಕಾರದ ಮೇಲೆ ಒತ್ತಡ ಇತ್ತು. ಇದೀಗ ಎನ್‌ಐಎ ತನಿಖೆ ಶುರುವಾಗಿದೆ.