ತುಮಕೂರಲ್ಲಿ ರಸ್ತೆ ಅಪಘಾತ: ರಾಜ್ಯ ಸರ್ಕಾರಕ್ಕೂ ಮುನ್ನ ಪ್ರಧಾನಿ ಮೋದಿ ಪರಿಹಾರ ಘೋಷಣೆ

Tumakuru Road Accident News: ಮೃತರ ಕುಟುಂಬಗಳ ನೆರವಿಗೆ ಪ್ರಧಾನಿ ಮೋದಿ ಧಾವಿಸಿದ್ದು ರಾಜ್ಯ ಸರ್ಕಾರದ ಮುನ್ನವೇ ಪರಿಹಾರ ಘೋಷಿಸಿದ್ದಾರೆ

First Published Aug 25, 2022, 1:40 PM IST | Last Updated Aug 25, 2022, 1:40 PM IST

ನವದೆಹಲಿ (ಆ. 25):  ತುಮಕೂರಿನ ಶಿರಾ ರಸ್ತೆಯ ಬಾಲೇನಹಳ್ಳಿ ಗೇಟ್ ಬಳಿ ನಡೆದ ಭೀಕರ ಅಪಘಾತದಲ್ಲಿ 9 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, 12ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರ ಕುಟುಂಬಗಳ ನೆರವಿಗೆ ಪ್ರಧಾನಿ ಮೋದಿ ಧಾವಿಸಿದ್ದು ರಾಜ್ಯ ಸರ್ಕಾರದ ಮುನ್ನವೇ ಪರಿಹಾರ ಘೋಷಿಸಿದ್ದಾರೆ. ಅಫಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ತಲಾ ₹2 ಲಕ್ಷ ಪರಿಹಾರ ಘೋಷಿಸಿದ್ದಾರೆ. 

"ಕರ್ನಾಟಕದ ತುಮಕೂರು ಜಿಲ್ಲೆಯಲ್ಲಿ ನಡೆದ ಅಪಘಾತ ಹೃದಯ ವಿದ್ರಾವಕ. ಅಪಘಾತದಲ್ಲಿ ಜೀವ ಕಳೆದು ಕೊಂಡವರಿಗೆ ಸಂತಾಪಗಳು. ಗಾಯಗೊಂಡವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥನೆ. ಮೃತರ ಕುಟುಂಬದವರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ ಎರಡು ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು" ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ. 

Karnataka Accident News: ಭೀಕರ ಅಪಘಾತ; ರಾಯಚೂರು ಮೂಲದ 9 ಮಂದಿ ಸ್ಥಳದಲ್ಲೇ ದುರ್ಮರಣ!