Karnataka Politics: 'ನಾಯಕತ್ವ ಬದಲಾವಣೆಯಿಲ್ಲ, ಮುಂದಿನ ಚುನಾವಣೆಗೂ ಬೊಮ್ಮಾಯಿಯದ್ದೇ ನೇತೃತ್ವ'

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಪ್ರಸ್ತಾಪವಾಗುತ್ತಿರುತ್ತದೆ. ಈ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Prahlad Joshi) ಸ್ಪಷ್ಟನೆ ನೀಡಿದ್ದಾರೆ.  ರಾಜ್ಯದಲ್ಲಿ 2023ರವರೆಗೂ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಪುನರುಚ್ಚರಿಸಿದ್ದಾರೆ. 

First Published Jan 22, 2022, 10:16 AM IST | Last Updated Jan 22, 2022, 10:37 AM IST

ಬೆಂಗಳೂರು (ಜ. 22): ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಪ್ರಸ್ತಾಪವಾಗುತ್ತಿರುತ್ತದೆ. ಈ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟನೆ ನೀಡಿದ್ದಾರೆ.  ರಾಜ್ಯದಲ್ಲಿ 2023 ರವರೆಗೂ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಪುನರುಚ್ಚರಿಸಿದ್ದಾರೆ. ಜತೆಗೆ, ರಾಜ್ಯ ಸಂಪುಟ ಪುನರ್‌ ರಚನೆಯೇನಿದ್ದರೂ ಪಂಚ ರಾಜ್ಯಗಳ ಚುನಾವಣೆ ಬಳಿಕವಷ್ಟೆಎಂಬ ಸುಳಿವನ್ನೂ ನೀಡಿದ್ದಾರೆ.

Corona Song:'ಕಾಣದ ಕಡಲಿಗೆ' ಹಾಡಿನ ದಾಟಿಗೆ ನ್ಯಾಯಾಧೀಶರಿಂದ ಕೊರೊನಾ ಹಾಡು

'ಈ ಕುರಿತು ಮುಖ್ಯಮಂತ್ರಿ ಬೊಮ್ಮಾಯಿ ಮತ್ತು ಹೈಕಮಾಂಡ್‌ ನಾಯಕರು ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಸದ್ಯ ಹೈಕಮಾಂಡ್‌ ನಾಯಕರು ಪಂಚರಾಜ್ಯಗಳ ಚುನಾವಣೆಯಲ್ಲಿ ಬ್ಯುಸಿಯಾಗಿದ್ದಾರೆ. ಆ ಬಳಿಕ ಪಕ್ಷದ ರಾಷ್ಟ್ರೀಯ ಮುಖಂಡರು ಬೊಮ್ಮಾಯಿ ಅವರ ಜೊತೆಗೆ ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ' ಎಂದರು.  

ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಕುರಿತ ಪ್ರಶ್ನೆಗೂ ಪ್ರತಿಕ್ರಿಯಿಸಿದ ಜೋಶಿ, ಈ ಕುರಿತು ಮುಖ್ಯಮಂತ್ರಿ ಬೊಮ್ಮಾಯಿ ಮತ್ತು ಹೈಕಮಾಂಡ್‌ ನಾಯಕರು ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಸದ್ಯ ಹೈಕಮಾಂಡ್‌ ನಾಯಕರು ಪಂಚರಾಜ್ಯಗಳ ಚುನಾವಣೆಯಲ್ಲಿ ಬ್ಯುಸಿಯಾಗಿದ್ದಾರೆ. ಆ ಬಳಿಕ ಪಕ್ಷದ ರಾಷ್ಟ್ರೀಯ ಮುಖಂಡರು ಬೊಮ್ಮಾಯಿ ಅವರ ಜೊತೆಗೆ ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಹೇಳಿದರು.

Video Top Stories