ಸೋಂಕು ಸಮುದಾಯಕ್ಕೆ ಹರಡಿಲ್ಲ: ಡಿಸಿಎಂ ಸಿ.ಎನ್‌. ಅಶ್ವತ್ಥ್ ನಾರಾಯಣ ಸ್ಪಷ್ಟನೆ

ನಮ್ಮ ರಾಜ್ಯದಲ್ಲಿ ಕೊರೋನಾ ಸೋಂಕು ಸಮುದಾಯಕ್ಕೆ ಹರಡಿಲ್ಲ. ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ನಮ್ಮಲ್ಲಿ ಸೋಂಕಿತರ ಸಂಖ್ಯೆ ಕಡಿಮೆ ಇದೆ. ಶೇ 90ರಷ್ಟು ಜನರು ಗುಣಮುಖರಾಗುತ್ತಿದ್ದಾರೆ ಎಂದು ಉಪ ಮುಖ್ಯಮಂತ್ರಿ ಸಿ.ಎನ್‌. ಅಶ್ವತ್ಥನಾರಾಯಣ ಎಂದು ಸ್ಪಷ್ಟಪಡಿಸಿದ್ದಾರೆ.

First Published Jul 6, 2020, 7:21 PM IST | Last Updated Jul 6, 2020, 7:21 PM IST

ಮಂಡ್ಯ, (ಜುಲೈ.06): ನಮ್ಮ ರಾಜ್ಯದಲ್ಲಿ ಕೊರೋನಾ ಸೋಂಕು ಸಮುದಾಯಕ್ಕೆ ಹರಡಿಲ್ಲ. ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ನಮ್ಮಲ್ಲಿ ಸೋಂಕಿತರ ಸಂಖ್ಯೆ ಕಡಿಮೆ ಇದೆ. ಶೇ 90ರಷ್ಟು ಜನರು ಗುಣಮುಖರಾಗುತ್ತಿದ್ದಾರೆ ಎಂದು ಉಪ ಮುಖ್ಯಮಂತ್ರಿ ಸಿ.ಎನ್‌. ಅಶ್ವತ್ಥನಾರಾಯಣ ಎಂದು ಸ್ಪಷ್ಟಪಡಿಸಿದ್ದಾರೆ.

ಬಿಗ್‌ಬಾಸ್ ನಿರೂಪಣೆಗೆ ರೂ. 16 ಕೋಟಿ, ಚೀನಾಗೆ ಮೋದಿ ಭೀತಿ; ಜು.6ರ ಟಾಪ್ 10 ಸುದ್ದಿ!

 ಸೋಮವಾರ ಮಂಡ್ಯದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು 'ಬೇರೆ ರಾಜ್ಯಗಳಲ್ಲೇ ಸೋಂಕು ಸಮುದಾಯಕ್ಕೆ ಹರಡಿಲ್ಲ, ಹೀಗಾಗಿ ನಮ್ಮಲ್ಲೂ ಹರಡಲು ಸಾಧ್ಯವಿಲ್ಲ. ಕೋವಿಡ್‌-19ನಿಂದ ಸಣ್ಣಪ್ರಮಾಣದ ರೋಗಿಗಳು ಗಂಭೀರ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಮುಂದೆ ಶೇ 5-6ರಷ್ಟು ಸೋಂಕಿತರು ಮಾತ್ರ ಆಸ್ಪತ್ರೆಗೆ ಬರುವ ಅವಶ್ಯಕತೆ ಇದೆ' ಎಂದರು.