Asianet Suvarna News Asianet Suvarna News

ರಸ್ತೆಯಲ್ಲಿ ಗಣೇಶ ಮೂರ್ತಿ ಇಡುವುದಕ್ಕೆ ಬ್ರೇಕ್..!

ಈ ಬಾರಿ ಗಲ್ಲಿ ಗಲ್ಲಿಗಳಲ್ಲಿ, ರಸ್ತೆಗಳಲ್ಲಿ ಗಣೇಶನ ಮೂರ್ತಿ ಇಡಬಾರದು, ಮನೆಯಲ್ಲಿಯೇ ಗಣೇಶನನ್ನು ಪೂಜಿಸಬೇಕು ಎಂದು ಬಿಬಿಎಂಪಿ ಮಹತ್ವದ ಆದೇಶ ಪ್ರಕಟಿಸಿದೆ. ಈ ಕುರಿತಂತೆ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಮಹತ್ವದ ಆದೇಶ ಹೊರಡಿಸಿದ್ದಾರೆ.

ಬೆಂಗಳೂರು(ಜು.28): ಕೊರೋನಾ ಭೀತಿಯ ನಡುವೆ ಗಣೆಶೋತ್ಸವ ಹಬ್ಬದ ಆಚರಣೆಗೆ ದಿನಗಣನೆ ಆರಂಭವಾಗಿದೆ. ಹೀಗಿರುವಾಗಲೇ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಗಣೇಶ ಹಬ್ಬದ ಕುರಿತಂತೆ ಮಹತ್ವದ ಆದೇಶ ಹೊರಡಿಸಿದೆ.

ಹೌದು, ಈ ಬಾರಿ ಗಲ್ಲಿ ಗಲ್ಲಿಗಳಲ್ಲಿ, ರಸ್ತೆಗಳಲ್ಲಿ ಗಣೇಶನ ಮೂರ್ತಿ ಇಡಬಾರದು, ಮನೆಯಲ್ಲಿಯೇ ಗಣೇಶನನ್ನು ಪೂಜಿಸಬೇಕು ಎಂದು ಬಿಬಿಎಂಪಿ ಮಹತ್ವದ ಆದೇಶ ಪ್ರಕಟಿಸಿದೆ. ಈ ಕುರಿತಂತೆ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಮಹತ್ವದ ಆದೇಶ ಹೊರಡಿಸಿದ್ದಾರೆ.

ಕೊರೋನಾ ಕಂಟ್ರೋಲ್ ಮಾಡಲು ಹೊಸ ಪ್ಲಾನ್ ಮಾಡಿದ ಬಿಬಿಎಂಪಿ..!

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಹೀಗಾಗಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಅಗತ್ಯವಿರುವುದರಿಂದ ಬಿಬಿಎಂಪಿ ಗಲ್ಲಿ ಗಲ್ಲಿಗಳಲ್ಲಿ ಗಣೇಶನ ಮೂರ್ತಿ ಪ್ರತಿಷ್ಠಾಪಿಸುವುದಕ್ಕೆ ಬ್ರೇಕ್ ಹಾಕಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

Video Top Stories