ಕರ್ನಾಟಕದಲ್ಲಿ ಲಾಕ್‌ಡೌನ್ ಬದಲಿಗೆ ಮತ್ತೊಂದು ಟಫ್ ರೂಲ್ಸ್: ಏನದು?
ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಜೋರಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮತ್ತೆ ಲಾಕ್‌ಡೌನ್ ಎನ್ನುವ ಸುದ್ದಿಗೆ ಸಚಿವ ಸುಧಾಕರ್ ಸ್ಪಷ್ಟನೆ ಕೊಟ್ಟಿದ್ದಾರೆ.
ಬೆಂಗಳೂರು, (ಏ.18): ಕರ್ನಾಟಕದಲ್ಲಿ ಕೊರೋನಾ 2ನೇ ಅಲೆ ವ್ಯಾಪಕವಾಗಿ ಹರಡಿದೆ. ಪ್ರತಿದಿನದ ಸೋಂಕು ಪ್ರಕರಣಗಳು ದಾಖಲೆ ಪ್ರಮಾಣದಲ್ಲಿ ವರದಿಯಾಗುತ್ತಿವೆ.
ಕರ್ನಾಟಕ ಮತ್ತೆ ಲಾಕ್‌ಡೌನ್ ಆಗುತ್ತಾ? ಬಗ್ಗೆ ಸಚಿವ ಅಶೋಕ್ ಹೇಳಿದ್ದು ಹೀಗೆ!
ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮತ್ತೆ ಲಾಕ್‌ಡೌನ್ ಮಾಡಲಾಗುತ್ತಾ ಎನ್ನುವ ಚರ್ಚೆಗಳು ನಡೆದಿವೆ. ಇನ್ನು ಈ ಬಗ್ಗೆ ಸ್ವತಃ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಪ್ರತಿಕ್ರಿಯಿಸಿದ್ದು, ಲಾಕ್‌ಡೌನ್ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆದ್ರೆ, ಲಾಕ್‌ಡೌನ್ ಬದಲಿಗೆ ಬೇರೆ ರೂಲ್ಸ್ ಎಂದು ಹೇಳಿದ್ದಾರೆ.