Omicron Variant Threat: ಲಾಕ್‌ಡೌನ್‌ ಪ್ರಸ್ತಾವ ಸರ್ಕಾರದ ಮುಂದಿಲ್ಲ: ಸಿಎಂ ಬೊಮ್ಮಾಯಿ

ಕೋವಿಡ್‌ (Covid 19) ಬಗ್ಗೆ ಜನತೆ ಗಾಬರಿಯಾಗಬೇಕಿಲ್ಲ, ರಾಜ್ಯದಲ್ಲಿ ಮತ್ತೆ ಲಾಕ್‌ ಡೌನ್‌ (Lockdown) ಪ್ರಸ್ತಾವ ಸರ್ಕಾರದ ಮುಂದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಸ್ಪಷ್ಟಪಡಿಸಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಡಿ. 01): ಕೋವಿಡ್‌ (Covid 19) ಬಗ್ಗೆ ಜನತೆ ಗಾಬರಿಯಾಗಬೇಕಿಲ್ಲ, ರಾಜ್ಯದಲ್ಲಿ ಮತ್ತೆ ಲಾಕ್‌ ಡೌನ್‌ (Lockdown) ಪ್ರಸ್ತಾವ ಸರ್ಕಾರದ ಮುಂದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಸ್ಪಷ್ಟಪಡಿಸಿದ್ದಾರೆ. ಶಾಲಾ-ಕಾಲೇಜುಗಳ ಮೇಲೆ ನಿಗಾ ಇಡುವಂತೆ ಸೂಚನೆ ನೀಡಿದ್ದೇವೆ. ಯಾವುದೇ ಶಾಲಾ-ಕಾಲೇಜು (School- College) ಮುಚ್ಚಲು ತಿಳಿಸಿಲ್ಲ ಎಂದೂ ಸ್ಪಷ್ಟಪಡಿಸಿದ್ದಾರೆ.

Omicron Variant Threat: ಫ್ರಂಟ್‌ಲೈನ್ ವಾರಿಯರ್ಸ್‌ಗೆ ಬೂಸ್ಟರ್ ಡೋಸ್, ಸುಧಾಕರ್ ಮಾತು

ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಿಗೂ ಕೇರಳ (Kerala) ವಿದ್ಯಾರ್ಥಿಗಳು ಹಾಗೂ ಇತರೆ ಜನರಿಗೆ ಕೋವಿಡ್‌ ನಗೆಟಿವ್‌ ವರದಿ ಕಡ್ಡಾಯಗೊಳಿಸಲಾಗಿದೆ. ಬಂದ 7 ದಿನಕ್ಕೆ ಮತ್ತೊಮ್ಮೆ ಪರೀಕ್ಷೆ ಮಾಡಿಸಲು ಸೂಚನೆ ನೀಡಲಾಗಿದೆ. ಜನರು ಹೆಚ್ಚು ಹೆಚ್ಚಾಗಿ ಗುಂಪು ಸೇರುವುದನ್ನು ತಡೆಯಲು ಜಿಲ್ಲಾಡಳಿತಗಳಿಗೆ ಸೂಚಿಸಲಾಗಿದೆ. ಸರ್ಕಾರ ನಿರಂತರವಾಗಿ ತಜ್ಞರು, ಕೇಂದ್ರ ಸರ್ಕಾರದ ಸಂಪರ್ಕದಲ್ಲಿದೆ. ಕಾಲ ಕಾಲಕ್ಕೆ ಕೇಂದ್ರ ಸರ್ಕಾರವು ನೀಡುವ ನಿರ್ದೇಶನದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

Related Video