ಲಾಕ್‌ಡೌನ್ ಆಗುತ್ತಾ? ಆಗಲ್ವಾ? ಸಾರ್ವಜನಿಕರ ಗೊಂದಲಕ್ಕೆ ತೆರೆ ಎಳೆದ ಸರ್ಕಾರ
ರಾಜ್ಯದಲ್ಲಿ ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ದಿನೇದಿನೇ ಕೊರೋನಾ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತೊಮ್ಮೆ ಲಾಕ್‌ಡೌನ್ ಜಾರಿಗೊಳಿಸಲಾಗುತ್ತದೆ ಎಂಬ ವದಂತಿಗಳಿಗೆ ರಾಜ್ಯ ಸರ್ಕಾರ ತೆರೆ ಎಳೆದಿದೆ.
ಬೆಂಗಳೂರು (ಜೂ. 26): ರಾಜ್ಯದಲ್ಲಿ ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ದಿನೇದಿನೇ ಕೊರೋನಾ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತೊಮ್ಮೆ ಲಾಕ್‌ಡೌನ್ ಜಾರಿಗೊಳಿಸಲಾಗುತ್ತದೆ ಎಂಬ ವದಂತಿಗಳಿಗೆ ರಾಜ್ಯ ಸರ್ಕಾರ ತೆರೆ ಎಳೆದಿದೆ.
ಸರ್ಕಾರದ ಆದೇಶಕ್ಕೂ ಡೋಂಟ್ ಕೇರ್ ಎನ್ನದ ಶಿಕ್ಷಣ ಇಲಾಖೆ..!
ಲಾಕ್‌ಡೌನ್ ಜಾರಿಗೊಳಿಸಿದರೆ ಶ್ರಮಿಕ ವರ್ಗಕ್ಕೆ ಮತ್ತಷ್ಟುತೊಂದರೆಯಾಗುವ ಸಾಧ್ಯತೆ ಇದೆ. ಬಡ ವರ್ಗದವರಿಂದ ಲಾಕ್‌ಡೌನ್ ಬೇಡ ಎಂಬ ಅಭಿಪ್ರಾಯಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಬಡವರ ಪರವಾಗಿ ತೀರ್ಮಾನ ಕೈಗೊಳ್ಳಲಾಗಿದೆ. ಕೊರೋನಾದೊಂದಿಗೆ ನಾವು ಮುಂದುವರಿಯಬೇಕಾದ ಅನಿಯವಾರ್ಯತೆ ನಿರ್ಮಾಣಗೊಂಡಿದೆ. ಲಾಕ್‌ಡೌನ್ ಮಾಡುವುದಿಲ್ಲ ಎಂದು ಸುವರ್ಣ ನ್ಯೂಸ್‌ಗೆ ಸ್ಪಷ್ಟಪಡಿಸಿದ್ದಾರೆ.